ಮುಲ್ಕಿ: ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಮಾಲಕರ ಯೂನಿಯನ್ (SDTU) ಮುಲ್ಕಿ ತಾಲೂಕು ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಕುಡಿಯುವ ನೀರಿನ ಸೇವೆಯ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SDTU ಮುಲ್ಕಿ ತಾಲೂಕು ಸಮಿತಿ ಅಧ್ಯಕ್ಷರಾದ ವಿಶುಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯರು ಹಾಗೂ ಮಂಗಳೂರು ನಗರ ಜಿಲ್ಲಾ ಅಧ್ಯಕ್ಷರಾದ ರಹಿಮಾನ್ ಬೋಳಿಯಾರ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಮಧುಕರ್, ನಿವೃತ್ತ ಶಿಕ್ಷಕರಾದ ವಿಶ್ವಾನಂದ ಶೆಟ್ಟಿ, ಉದ್ಯಮಿಗಳಾದ ವೀರಯ್ಯ ವಿ. ಹಿರೇಮಠ, ರಾಯಿಝ್ ಮುಲ್ಕಿ, ಎ.ಎಚ್. ಖಾದರ್, ಇಮ್ರಾನ್ ಮುಲ್ಕಿ, ಮುಝಮ್ಮಿಲ್ ಮುಲ್ಕಿ, ಯುವಕ ವೃಂದ ಮುಲ್ಕಿ ವಲಯದ ಅಧ್ಯಕ್ಷರಾದ ಮುಹಮ್ಮದ್ ಅಲಿ, SDTU ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ಇರ್ಫಾನ್ ಕಾನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗರೆ, ಜಿಲ್ಲಾ ಸಮಿತಿ ಸದಸ್ಯರಾದ ರಹೀಂ ಮುಲ್ಕಿ, SDTU ಮಂಗಳೂರು ನಗರ ತಾಲೂಕು ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಬಿ.ಪಿ. ಮಂಗಳೂರು ಮಾಡೆಲ್ಸ್ ಮಾಲಕರಾದ ಹಮೀದ್ ಶಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಾರ್ವಜನಿಕರಿಗೆ ಉಚಿತ ಕುಡಿಯುವ ನೀರಿನ ಸೇವೆಯನ್ನು ಆರಂಭಿಸುವ ಮೂಲಕ SDTU ಮುಲ್ಕಿ ತಾಲೂಕು ಸಮಿತಿಯು ಸ್ವಾತಂತ್ರ್ಯ ದಿನಾಚರಣೆಯನ್ನು ಜನಪರ ಹಾಗೂ ಸಮಾಜಮುಖಿ ಕಾರ್ಯದೊಂದಿಗೆ ಆಚರಿಸಿತು.


