ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

Date:


ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ ಮಾಡಿದರೆ ಮಾತ್ರ ಅವರ ಬದುಕಿನ ದಾರಿ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಶಾಫಿ ಸಖಾಫಿ ಮುಂಡಂಬ್ರ ಹೇಳಿದರು.
ಅವರು ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್, ಕೆಸಿಎಫ್ ಮಂಜನಾಡಿ ಇದರ ಆಶ್ರಯದಲ್ಲಿ ಶನಿವಾರ ಮಂಜನಾಡಿ ಜಂಕ್ಷನ್ ನಲ್ಲಿ ನಡೆದ ಹುಬ್ಬುರ್ರಸೂಲ್ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಅವರು ಕಷ್ಟದ ಸಂದರ್ಭದಲ್ಲಿ ಎಲ್ಲರಿಗೂ ನೆರವಾಗುವ ಒಬ್ಬ ವ್ಯಕ್ತಿ ಆಗಿದ್ದರು. ಅವರ ಉಪದೇಶವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.


ಕೆಎಮ್ ಜೆ ಮಂಜನಾಡಿ ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಮಂಜನಾಡಿ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಅಹ್ಮದ್ ಬಾಖವಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬುರ್ದಾ ಹಾಗೂ ಮೌಲಿದ್ ಮಜ್ಲಿಸ್ ನಡೆಯಿತು. ಸಯ್ಯಿದ್ ಶರ್ಫುದ್ದೀನ್ ತಂಙಳ್ ದುಆ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಕೆಏಮ್ ಜೆ ರಾಜ್ಯ ಸಮಿತಿ ಸದಸ್ಯ ಆಲಿ ಕುಂಞಿ ಪಾರೆ, ಎ ಹುಬ್ಬು ರಸೂಲ್ ಕಾನ್ಫರೆನ್ಸ್ ಸ್ವಾಗತ ಸಮಿತಿ ಅಧ್ಯಕ್ಷ ಎನ್ ಎಸ್ ಕರೀಮ್, ಕಲ್ಕಟ ಮಸೀದಿ ಖತೀಬ್ ಇಸ್ಹಾಕ್ ಸಖಾಫಿ ನಂದಾವರ, ಕೆಎಮ್ ಕೆ ಮಂಜನಾಡಿ, ಅಬ್ದುಲ್ ರಹ್ಮಾನ್ ರಝ್ವಿ, ಅನ್ಸಾರ್ ನಗರ ಬಾವು, ಉಸ್ಮಾನ್ ಸಖಾಫಿ, ಮಂಜನಾಡಿ ಕೇಂದ್ರ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಅಝೀಝ್ ಪರ್ತಿಪ್ಪಾಡಿ, ಕೋಶಾಧಿಕಾರಿ ಉಮರ್ ಕುಂಞಿ ಮೋರ್ಲ,ಸಿದ್ದೀಕ್ ಅಹ್ಸನಿ ಮತ್ತಿತರರು ಉಪಸ್ಥಿತರಿದ್ದರು. ಇಬ್ರಾಹೀಮ್ ಅಹ್ಸನಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...