ಬೆಂಗಳೂರು: ಸಮಾಜ ಸೇವೆಯಲ್ಲಿ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಗುರುತಿಸಿ ಎಶಾ ಗೌರಿ ಅವರಿಗೆ ಕರ್ನಾಟಕ ಎಜುಕೇಷನಲ್ ಅವಾರ್ಡ್ಸ್ 2026 ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಯೂತ್ ಎಫರ್ಟ್ಸ್ ಫಾರ್ ಸೊಸೈಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪ್ರಶಸ್ತಿ ಸಮಾರಂಭದಲ್ಲಿ, ‘ಸಮುದಾಯ ಸೇವೆ ಮಾಡುವ ವ್ಯಕ್ತಿ’ (Individual – The Person Who Serves to the Community) ವಿಭಾಗದಲ್ಲಿ ಎಶಾ ಗೌರಿ ಪ್ರಶಸ್ತಿ ಸ್ವೀಕರಿಸಿದರು.

ಆಗಸ್ಟ್ 22ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ & ಗೈಡ್ಸ್ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾಜದ ಒಳಿತಿಗಾಗಿ ಎಶಾ ಗೌರಿ ಅವರು ಮಾಡುತ್ತಿರುವ ಸೇವಾ ಕಾರ್ಯಗಳನ್ನು ಶ್ಲಾಘಿಸಿದ ಆಯೋಜಕರು, ಇದೇ ರೀತಿಯಲ್ಲಿ ಮುಂದೆಯೂ ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸಿ ಇತರರಿಗೆ ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದರು.
ಕರ್ನಾಟಕ ಎಜುಕೇಷನಲ್ ಅವಾರ್ಡ್ಸ್ 2026 ಕಾರ್ಯಕ್ರಮವು ಶಿಕ್ಷಣ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವವರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಆಯೋಜಿಸಲಾಗಿತ್ತು.


