ಕಣಚೂರು ಫಾರ್ಮಸಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

Date:

ದೇರಳಕಟ್ಟೆ: ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ಅಧೀನದ ಕಣಚೂರು ಕಾಲೇಜ್ ಆಫ್ ಫಾರ್ಮಸಿ ವತಿಯಿಂದ 2026-27ನೇ ಸಾಲಿನ ಬಿ ಫಾಮ್ ೯ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಕಣಚೂರು ಕಾನ್ಫರೆನ್ಸ್ ಡ್ರೋಮ್ ನಲ್ಲಿ ನಡೆಯಿತು.

ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ನಿರ್ದೇಶಕ ಅಬ್ದುಲ್ ರಹಿಮಾನ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು
ಔಷಧ ವಿಜ್ಞಾನವು ಸಮಾಜದ ಆರೋಗ್ಯದೊಂದಿಗೆ ನೇರವಾಗಿ ಸಂಬಂಧ ಹೊಂದಿರುವ ಮಹತ್ವದ ಕ್ಷೇತ್ರವಾಗಿದೆ. ಬಿ.ಫಾರ್ಮ್ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಪಠ್ಯಜ್ಞಾನದ ಜೊತೆಗೆ ಪ್ರಾಯೋಗಿಕ ಜ್ಞಾನ, ಸಂಶೋಧನಾ ಮನೋಭಾವ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಭವಿಷ್ಯದಲ್ಲಿ ಉತ್ತಮ ಫಾರ್ಮಸಿಸ್ಟ್‌ಗಳಾಗಿ ಸಮಾಜಕ್ಕೆ ಸೇವೆ ಸಲ್ಲಿಸುವ ಗುರಿಯನ್ನು ವಿದ್ಯಾರ್ಥಿಗಳು ಹೊಂದಬೇಕು. ಕಾಲೇಜಿನಲ್ಲಿ ದೊರೆಯುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು.

ಕನಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಬಳಿಕ ಮಾತನಾಡಿದ ಅವರು
ಭವಿಷ್ಯದ ಯಶಸ್ಸಿಗೆ ಶಿಸ್ತು ಮತ್ತು ಕಠಿಣ ಪರಿಶ್ರಮದ ಅಗತ್ಯ. ಅಗತ್ಯತೆಯನ್ನು ಮನವರಿಕೆ ಮಾಡಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಕಟ್ಟಿಕೊಳ್ಳಲಬೇಕು ಎಂದು ಹೇಳಿದರು.

ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಲಹಾ ಸಮಿತಿ ಸದಸ್ಯ ಡಾ. ಕೆ.ವಿ. ಪ್ರಭು, ಮುಖ್ಯ ಆಡಳಿತಾಧಿಕಾರಿಡಾ. ರೋಹನ್ ಎಸ್. ಮೊನಿಸ್, ಡೀನ್ ಡಾ. ಶಹನವಾಝ್ ಮಾಣಿಪ್ಪಾಡಿ, ವೈದ್ಯಕೀಯ ಅಧೀಕ್ಷಕ ಡಾ. ರಜಿನ್ ಕುಮಾರ್ , ಫೀಝಿಯೋಥರಫಿ ಕಾಲೇಜ್ ಪ್ರಾಂಶುಪಾಲ
ಡಾ. ಸುಹೈಲ್, ಅಲೈಡ್ ಹೆಲ್ತ್ ಸೈನ್ಸ್ ಪ್ರಾಂಶುಪಾಲೆ ಡಾ. ಶಮೀನಾ ಮಾಣಿಪ್ಪಾಡಿ,
ಆಯುರ್ವೇದ ಕಾಲೇಜಿ ಪ್ರಾಂಶುಪಾಲೆ ಡಾ. ವಿದ್ಯಾ ಪ್ರಭಾ, ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ಡಾ. ಮೊಲಿ ಸಲ್ದಾನ್ಹಾ ಉಪಸ್ಥಿತರಿದ್ದರು.

ಕಣಚೂರು ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ರಾಜಿವ್ ಕುಮಾರ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ತೃಪ್ತಿ ಎನ್ ವಂದಿಸಿದರು‌. ಉಪನ್ಯಾಸಕಿ ಶ್ವೇತ ಮತ್ತು ಸುಭಾಶಿತಾ ಕಾರ್ಯಕ್ರಮ ನಿರೂಪಿಸಿದರು.

ನೂತನವಾಗಿ ಪ್ರವೇಶ ಪಡೆದ ಬಿ.ಫಾರ್ಮ್ ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ವ್ಯವಸ್ಥೆ, ತರಬೇತಿ, ಪ್ರಯೋಗಾಲಯ ಹಾಗೂ ಭವಿಷ್ಯದ ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸೇತುವೆ ಕುಸಿತ: ತಕ್ಷಣ ಸ್ಪಂದಿಸಿದ ಬಜ್ಪೆ ನಾಗರಿಕರಕ್ಷಣಾ ವೇದಿಕೆ – ಎರಡು ದಿನಗಳಲ್ಲಿ ಪರ್ಯಾಯ ರಸ್ತೆ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

ಬಜ್ಪೆ, ಮಂಗಳೂರು–ಬಜ್ಪೆ–ಕಟ್ಟೀಲ್ ರಾಜ್ಯ ಹೆದ್ದಾರಿಯ ಕರಬಾರು ಸಮೀಪದಲ್ಲಿರುವ ಸೇತುವೆ ಕುಸಿದು ವಾಹನ...

ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಗೊಂದಲ – ಅಕೀಮ್ ಕೂರ್ನಡ್ಕ ಆಸ್ಪತ್ರೆಗೆ ದಾಖಲು

ಪುತ್ತೂರು: ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಉಂಟಾದ ಗೊಂದಲ ಹಾಗೂ ಉದ್ವಿಗ್ನ...

ಸೆ.ಬಂಟ್ಸ್ ಹಾಸ್ಟೆಲ್, ಶ್ರೀ ರಾಮಕೃಷ್ಣ ಶಾಲಾ ಮೈದಾನದಲ್ಲಿ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ

ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ ದಕ್ಷಿಣ ಕನ್ನಡ, ಉಡುಪಿ ಮತ್ತು...