ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ: ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ

Date:

ಬಂಟ್ವಾಳ, ಸೆ.2: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಜಿಲ್ಲಾಧ್ಯಕ್ಷೆ ಶಿನೀರ ಬಾನು ಧ್ವಜಾರೋಹಣ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು.

ಸಭೆಯಲ್ಲಿ 2024–2026ರ ಅವಧಿಯಲ್ಲಿ ಸಂಘಟನೆಯ ವತಿಯಿಂದ ಹಮ್ಮಿಕೊಂಡ ವಿವಿಧ ಸಾಮಾಜಿಕ, ಮಹಿಳಾ ಸಬಲೀಕರಣ ಹಾಗೂ ಜನಪರ ಚಟುವಟಿಕೆಗಳ ವರದಿಯನ್ನು ಮಂಡಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಿನೀರ ಬಾನು, ಮಹಿಳೆಯರ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದರು. SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಎಸ್. ನಾಯಕತ್ವದ ಕುರಿತು ತರಬೇತಿ ನೀಡಿದರು. WIM ಕರ್ನಾಟಕ ರಾಜ್ಯ ಕಾರ್ಯದರ್ಶಿ ನಸ್ರಿಯ ಬೆಳ್ಳಾರೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಚುನಾವಣಾಧಿಕಾರಿಗಳಾದ ರಮ್ಲತ್ ಮಂಗಳೂರು ಹಾಗೂ ಝುಲೈಕ ಅವರ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿನೀರ ಬಾನು ಅವರನ್ನು WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷೆಯಾಗಿ ಪುನರಾಯ್ಕೆಗೊಂಡರು. ಅವರ ನೇತೃತ್ವದಲ್ಲಿ ಮುಂದಿನ ಅವಧಿಗೆ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು.

ನೂತನ ಪದಾಧಿಕಾರಿಗಳು:

ಜಿಲ್ಲಾಧ್ಯಕ್ಷೆ: ಶಿನೀರ ಬಾನು, ಪ್ರಧಾನ ಕಾರ್ಯದರ್ಶಿ: ಝರೀನಾ ಉಪ್ಪಿನಂಗಡಿ, ಉಪಾಧ್ಯಕ್ಷೆ: ಝಹನ, ಕಾರ್ಯದರ್ಶಿ: ನುಸೈಬ ಕಲ್ಲಡ್ಕ, ಕೋಶಾಧಿಕಾರಿ: ನೌರಿನ ಅಲಂಪಾಡಿ

ಸದಸ್ಯೆಯರು: ಶಮ ಉಜಿರೆ, ಝೈಬುನ್ನಿಸಾ ಬಿ.ಸಿ.ರೋಡ್, ಮರಿಯಮ್ಮ ಮೊಡಂತ್ಯಾರ್, ಗೌಸಿಯಾ ಪೊನ್ನೋಡಿ, ರುಬಿಯ ಬೆಳ್ತಂಗಡಿ, ಸನಾ ಸುಳ್ಯ, ಆಫ್ರಿನ್ ಬಂಟ್ವಾಳ ಹಾಗೂ ಮೆಹರು ಅತೂರು.

ಝಹನ ಅಕ್ಕರಂಗಡಿ ಸ್ವಾಗತಿಸಿದರು. ಮುರ್ಷಿದ ಹಾಗೂ ಮುಸ್ಕಾನ್ ಕಾರ್ಯಕ್ರಮ ನಿರೂಪಿಸಿದರು. ನೂತನವಾಗಿ ಆಯ್ಕೆಯಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝರೀನಾ ಉಪ್ಪಿನಂಗಡಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...