ತನಲ್ ಕುಟುಂಬಕ್ಕೊಂದು ಸೂರು”ಬಡಕುಟುಂಬಕ್ಕೆ ಸೂರು ನಿರ್ಮಿಸಿಕೊಟ್ಟ ಮುಡಿಪು ಯಂಗ್ ಮೆನ್ಸ್ ವೆಲ್ಫೇರ್ ಅಸೋಸಿಯೇಷನ್

Date:

ದೇರಳಕಟ್ಟೆ: ಸಜೀಪಪಡು ಗ್ರಾಮದ ದಾಸರಕೋಡಿ ಎಂಬಲ್ಲಿ ತೀರಾ ಶಿಥಿಲಾವಸ್ಥೆಯಲ್ಲಿದ್ದ ಮನೆಯಲ್ಲಿ ವಾಸವಾಗಿದ್ದ ಬಡ ಕುಟುಂಬವೊಂದಕ್ಕೆ ಮುಡಿಪುವಿನ ಯಂಗ್ ಮೆನ್ಸ್ ವೆಲ್ಫೇರ್ ಅಸೋಸಿಯೇಷನ್ ಆಸರೆಯಾಗಿ ಇದೀಗ “ತನಲ್ ಕುಟುಂಬಕ್ಕೊಂದು ಸೂರು” ಎಂಬ ಧ್ಯೇಯದೊಂದಿಗೆ ನೂತನ ಮನೆ ನಿರ್ಮಿಸಿ ಕೊಡುವುದರೊಂದಿಗೆ ನೂತನ
ಮನೆಯ ಕೀ ಹಸ್ತಾಂತರ ಕಾರ್ಯಕ್ರಮವು ಶುಕ್ರವಾರ ನಡೆಯಿತು.
ಕರ್ನಾಟಕ ರಾಜ್ಯದ ವಕ್ಫ್ ಬೋರ್ಡ್ ಸದಸ್ಯರಾದ
ಸಯ್ಯದ್ ಆದೂರು ತಂಙಳ್ ಅವರು ಮನೆಯವರಾದ ಲತೀಫ್ ಅವರಿಗೆ ಮನೆಯ ಕೀ ಯನ್ನು ಹಸ್ತಾಂತರಿಸಿ ಮಾತನಾಡಿ, ಸಮಾಜದಲ್ಲಿ ಸಂಕಷ್ಟದಲ್ಲಿರುವವರ ಸಹಾಯಕ್ಕೆ ನಿಂತರೆ ನಮಗೆ ದೇವರ ದಯೆಯಿರುತ್ತದೆ. ಮುಡಿಪುವಿನ ಯಂಗ್ ಮೆನ್ಸ್ ವೆಲ್ಪೇರ್ ಅಸೋಸಿಯೇಷನ್ ಅವರು ಸಮಾಜಮುಖಿ ಕಾರ್ಯಚಟುವಟಿಕೆಗಳೊಂದಿಗೆ ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಇದೀಗ ಬಡಕುಟುಂಬಕ್ಕೆ ಮನೆಯನ್ನು ನಿರ್ಮಿಸಿಕೊಟ್ಟು ಕುಟುಂಬಕ್ಕೆ ಆಸರೆಯಾಗಿರುವುದು ಮಾದರಿ ಕಾರ್ಯವಾಗಿದೆ ಎಂದರು.
ಸಮಾಜ ಸೇವಕ ಸಯ್ಯದ್ ಸಲಾಂ ಜಿ, ಬೆಂಗಳೂರು ಅವರು ಅಸೋಸಿಯೇಷನ್ ನ ಲೋಗೋವನ್ನು ಅನಾವರಣಗೊಳಿಸಿ ಮಾತನಾಡಿ, ಸಂಘಟನೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಯಂಗ್ ಮೆನ್ ಅಸೋಸಿಯೇಷನ್ ಇವತ್ತು ಬಡವರಿಗೆ ಸೂರು ಕಲ್ಪಿಸುವುದರೊಂದಿಗೆ ಅವರಿಗೆ ಆಸರೆಯಾಗಿ ನಿಂತಿರುವುದು ಹೆಮ್ಮೆಯ ಕೆಲಸವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ‌ ಜಗದೀಶ್ ಆಳ್ವ ಕುವತ್ತಬೈಲ್, ಸಮಾಜ ಸೇವಕ ಡಾ.ಶೇಖ್ ಬಾವ ಹಾಜಿ, ಕೂಳೂರು ಮಸೀದಿಯ ಅಧ್ಯಕ್ಷ ಶಹನವಾಝ್,
ಯಂಗ್ ಮೆನ್ಸ್ ವೆಲ್ಫೇರ್ ಅಸೋಸಿಯೇಷನ್ ನ ಗೌರವಾಧ್ಯಕ್ಷರಾದ‌ ಎಸ್. ಕೆ. ಅಬ್ದುಲ್ ಖಾದರ್ ಹಾಜಿ , ಸ್ಥಾಪಕಾಧ್ಯಕ್ಣರಾದ ಸಿರಾಜ್ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷರಾದ ಅಬೂಬಕ್ಕರ್ ಹೂಹಾಕುವ ಕಲ್ಲು ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಸಂಘದ ಸದಸ್ಯರಾದ ಅಬ್ದುಲ್ ರಹಿಮಾನ್ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು

ಪ್ರಧಾನ ಕಾರ್ಯದರ್ಶಿ ಅಸ್ಗರ್ ಮುಡಿಪು ಅವರು ಸ್ವಾಗತಿಸಿದರು. ಸದಸ್ಯರಾದ ಹೈದರ್ ಕೈರಂಗಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯ ಬಶೀರ್ ಮುಡಿಪು ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...