
ದೇರಳಕಟ್ಟೆ: ಕಣಚೂರು ಕಾಲೇಜ್ ಆಫ್ ಫಿಸಿಯೋಥೆರಪಿ ಹಾಗೂ ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಇದರ 2026-27ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಓರಿಯಂಟೇಶನ್ ಡೇ ಕಾರ್ಯಕ್ರಮ ಕಣಕಚೂರು ಕಾನ್ಫರೆನ್ಸ್ ಡೋಮ್‌ನಲ್ಲಿ ನಡೆಯಿತು.

ಕೊಣಾಜೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಹಾಗೂ ಆ್ಯಂಟಿ-ಡ್ರಗ್ ಕಮಿಟಿಯ ನೋಡಲ್ ಅಧಿಕಾರಿ ಪುನೀತ್ ಗಾವೋಂಕರ್ ಓರಿಯಂಟೇಶನ್ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಉತ್ತಮ ಜೀವನಶೈಲಿ ಹಾಗೂ ಶಿಸ್ತು ಬೆಳೆಸಿಕೊಳ್ಳಬೇಕು. ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಯುವಜನರು ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ವಹಿಸಿದ್ದರು.
ಬಳಿಕ ಮಾತನಾಡಿದ ಅವರು ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಜ್ಞಾನ, ಕೌಶಲ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು ಎಂದು ಹೇಳಿದರು.

ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಸಲಹಾ ಸಮಿತಿ ಸದಸ್ಯ ಡಾ. ಎಂ. ವಿ. ಪ್ರಭು, ಡೀನ್ ಡಾ. ಶಹನವಾಝ್ ಮಾಣಿಪ್ಪಾಡಿ, ವೈದ್ಯಕೀಯ ಅಧೀಕ್ಷಕ ಡಾ. ಅಂಜನ್ ಕುಮಾರ್ , ಮುಖ್ಯ ವೈದ್ಯಕೀಯ ಆಡಳಿತಾಧಿಕಾರಿ ಡಾ. ರೋಹನ್ ಮೋನಿಸ್,
ಕಣಚೂರು ನರ್ಸಿಂಗ್ ಸೈನ್ಸಸ್ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಡಾ. ಮೋಲಿ ಸಲ್ಡಾನ್ಹಾ,
ಫಾರ್ಮಸಿ ಕಾಲೇಜ್ ಪ್ರಾಂಶುಪಾಲ್ ಡಾ. ರಾಜೀವ್ ಕುಮಾರ್ ಉಪಸ್ಥಿತರಿದ್ದರು
ಕಣಚೂರು ಕಾಲೇಜ್ ಆಫ್ ಫಿಸಿಯೋಥೆರಪಿ ಡೀನ್ ಡಾ. ಮೊಹಮ್ಮದ್ ಸುಹೈಲ್ ಸಂಸ್ಥೆಯ ನಿಯಮಗಳು ಮತ್ತು ನಿಬಂಧನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಪ್ರಾಂಶುಪಾಲೆ ಡಾ. ಶಮೀಮಾ ಮಾಣಿಪ್ಪಾಡಿ ಸ್ವಾಗತಿಸಿದರು. .
ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಅಸೋಸಿಯೇಟ್ ಪ್ರೊಫೆಸರ್ ಪ್ರತೀಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


