ಕಣಚೂರು ಕಾಲೇಜ್ ಆಫ್ ಫಾರ್ಮಸಿಯ ವತಿಯಿಂದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ: ಕಾಲ್ನಡಿಗೆ ಜಾಥ

Date:

ದೇರಳಕಟ್ಟೆ: ಕಣಚೂರು ಕಾಲೇಜ್ ಆಫ್ ಫಾರ್ಮಸಿಯ ವತಿಯಿಂದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ–2026ರ ಅಂಗವಾಗಿ ದೇರಳಕಟ್ಟೆಯಿಂದ‌ ಕಣಚೂರು ಕ್ಯಾಂಪಸ್ ವರೆಗೆ ಕಾಲ್ನಡಿಗೆ ಜಾಥ ನಡೆಯಿತು.

ಆರೋಗ್ಯಕರ ಭವಿಷ್ಯಕ್ಕಾಗಿ ಫಾರ್ಮಸಿಸ್ಟ್‌ಗಳನ್ನು ಸಬಲೀಕರಣಗೊಳಿಸುವುದು – ಸ್ವಚ್ಛ ಭಾರತ, ಆಂಟಿಮೈಕ್ರೋಬಿಯಲ್ ರೆಸಿಸ್ಟೆನ್ಸ್ ವಿರುದ್ಧ ಹೋರಾಟ” ಎಂಬ ಸಂದೇಶದೊಂದಿಗೆ ಕಾಲ್ನಡಿಗೆ ಜಾಥಕ್ಕೆ ಬೆಂಗಳೂರಿನ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಸೆಂಟ್ರಲ್ ಕೌನ್ಸಿಲ್ ಸದಸ್ಯ ಡಾ. ಸಲೀಮುಲ್ಲಾ ಖಾನ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ವಿಶ್ವ ಫಾರ್ಮಸಿಸ್ಟ್ ದಿನದ ಮಹತ್ವ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್‌ಗಳ ಜವಾಬ್ದಾರಿಯ ಕುರಿತು ಮಾತನಾಡಿದರು.

ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ವಹಿಸಿದ್ದರು.

ಕೊಣಾಜೆ ಪೊಲೀಸ್ ಠಾಣೆಯ ಎಸ್‌.ಐ. ನಾಗರಾಜ್ , ಕಾನ್‌ಸ್ಟೇಬಲ್ ಶರೀಫ್, ಕಣಚೂರು ಆಯುರ್ವೇದ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಸುರೇಶ್ ನೆಗಳಗುಳಿ, ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ವೈದ್ಯಕೀಯ ಅಧೀಕ್ಷಕ ಡಾ. ಅಂಜನ್ ಕುಮಾರ್ , ಮುಖ್ಯ ವೈದ್ಯಕೀಯ ಆಡಳಿತಾಧಿಕಾರಿ ಡಾ. ರೋಹನ್ ಮೋನಿಸ್, ಕಣಚೂರು ನರ್ಸಿಂಗ್ ಸೈನ್ಸಸ್ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಡಾ. ಮೋಲಿ ಸಲ್ಡಾನ್ಹಾ, ಫಾರ್ಮಸಿ ಕಾಲೇಜ್ ಪ್ರಾಂಶುಪಾಲ್ ಡಾ. ರಾಜೀವ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...