ದೆಹಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ, ಹೋರಾಟಗಾರರ ಬಂಧನ ಖಂಡಿಸಿ ಎಸ್‌ಡಿಪಿಐಯಿಂದ ರ‍್ಯಾಲಿ ಹಾಗೂ ಪ್ರತಿಭಟನೆ

Date:

ಬಂಟ್ವಾಳ: ದೆಹಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವುದು ಹಾಗೂ ಹೋರಾಟಗಾರರನ್ನು ಬಂಧಿಸುತ್ತಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ರ‍್ಯಾಲಿ ಹಾಗೂ ಪ್ರತಿಭಟನೆ ನಡೆಯಿತು.

ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ನೀತಿಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಎಸ್‌ಐಆರ್‌ನಿಂದ ಮಹಿಳೆಯರೇ ಹೆಚ್ಚು ತೊಂದರೆ ಅನುಭವಿಸಿದ್ದಾರೆ: ಶಾಹಿದ ತಶ್ನೀಮ್

ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಿಂದ ಮಹಿಳೆಯರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ವಿಮೆನ್ ಇಂಡಿಯಾ ಮೂವ್‌ಮೆಂಟ್‌ನ ಕರ್ನಾಟಕ ರಾಜ್ಯಾಧ್ಯಕ್ಷೆ ಶಾಹಿದ ತಶ್ನೀಮ್ ಹೇಳಿದರು.

ಮದುವೆಯಾಗಿ ಗಂಡನ ಮನೆಗೆ ತೆರಳಿರುವ ಮಹಿಳೆಯರ ಹೆಸರುಗಳನ್ನು ವಿವಿಧ ನೆಪಗಳನ್ನು ಮುಂದಿಟ್ಟುಕೊಂಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಇಂತಹ ಕ್ರಮಗಳಿಂದ ಮಹಿಳೆಯರು ಅನಗತ್ಯ ತೊಂದರೆಗಳನ್ನು ಎದುರಿಸುವಂತಾಗಿದೆ. ಇದು ಮಹಿಳೆಯರ ಮತದಾನದ ಹಕ್ಕಿನ ಮೇಲೆ ಪರಿಣಾಮ ಬೀರುವ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

NRC, CAA, ಎಸ್‌ಐಆರ್‌ನಂತಹ ಕರಾಳ ಕಾನೂನುಗಳ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ: ಅಶ್ರಫ್ ತಲಪಾಡಿ

NRC, CAA ಮತ್ತು ಎಸ್‌ಐಆರ್‌ನಂತಹ ಕರಾಳ ಕಾನೂನುಗಳ ವಿರುದ್ಧ ಹೋರಾಡುವ ಕಾರ್ಯಕರ್ತರು ನಮ್ಮಲ್ಲಿದ್ದಾರೆ. ಸಂಘ ಪರಿವಾರದ ಅಜೆಂಡಾದ ಭಾಗವಾಗಿರುವ ಇಂತಹ ಕಾನೂನುಗಳನ್ನು ಜಾರಿಗೊಳಿಸಿದರೂ, ಅವುಗಳ ವಿರುದ್ಧ ಹೋರಾಟ ನಡೆಸುವವರನ್ನು ಬಂಧಿಸಿದರೂ ನಮ್ಮ ಹೋರಾಟವನ್ನು ದಮನಿಸಲು ಸಾಧ್ಯವಿಲ್ಲ. ಅಂದು ಕೂಡ ನಾವು ಹೋರಾಟದ ಮುಂಚೂಣಿಯಲ್ಲಿದ್ದೆವು, ಇಂದು ಕೂಡ ಇದ್ದೇವೆ, ಮುಂದೆಯೂ ಹೋರಾಟ ಮುಂದುವರಿಸಲಿದ್ದೇವೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಎಚ್ಚರಿಸಿದರು.

ಜ್ಞಾನೇಶ್ ಕುಮಾರ್‌ಗೆ ಪ್ರಶ್ನೆ ಕೇಳಿದರೆ ಬಿಜೆಪಿ ಉತ್ತರ ನೀಡುವುದೇಕೆ?: ಮುನೀಶ್ ಅಲಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಯಾರಾದರೂ ಪ್ರಶ್ನಿಸಿದರೆ ಬಿಜೆಪಿ ಉತ್ತರ ನೀಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣಾ ಆಯೋಗವು ಬಿಜೆಪಿಯ ಅಥವಾ ಆರ್‌ಎಸ್‌ಎಸ್‌ನ ಅಂಗಸಂಸ್ಥೆಯೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಯಂಗ್ ಡೆಮಾಕ್ರಟಿಕ್‌ನ ರಾಜ್ಯ ಜೊಯಿಂಟ್ ಕನ್ವೀನರ್ ಮುನೀಶ್ ಅಲಿ ಪ್ರಶ್ನಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ

ಪ್ರತಿಭಟನಾ ಸಭೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕೋಶಾಧಿಕಾರಿ ರಹೀಮ್ ಇಂಜಿನಿಯರ್, ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಕ್ಷೇತ್ರ ಸಮಿತಿ ಸದಸ್ಯರು, ವಿಮೆನ್ ಇಂಡಿಯಾ ಮೂವ್‌ಮೆಂಟ್‌ನ ನಾಯಕಿಯರು, ಯಂಗ್ ಡೆಮಾಕ್ರಟಿಕ್ ಕಾರ್ಯಕರ್ತರು, ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...