ಉದ್ಯಮದ ಕನಸು ಕಂಡಿದ್ದ ಯುವಕ ನೇಣಿಗೆ ಶರಣು

Date:

ಮೂಡಬಿದಿರೆ: ಇಲ್ಲಿನ ರಿಂಗ್ ರೋಡ್ ಬಳಿಯಲ್ಲಿ ಹೊಟೇಲ್ ಉದ್ಯಮವನ್ನು ಆರಂಭಿಸಬೇಕೆಂದು ಕನಸು ಕಂಡಿದ್ದ ಯುವಕನೋವ೯ ನೇಣಿಗೆ ಶರಣಾದ ಘಟನೆ ಶನಿವಾರ ಮಧ್ಯಾಹ್ನ ನಾಗರಕಟ್ಟೆಯಲ್ಲಿ ನಡೆದಿದೆ. ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ರಸ್ತೆಯ ಬಳಿ ಕಬ್ಬಿನ ಜ್ಯೂಸ್ ನ ಮಾರಾಟ ಮಾಡುತ್ತಿರುವ ಶ್ರೀನಿವಾಸ್ ಅವರ ಮಗ ದೀಕ್ಷಿತ್ (35) ಆತ್ಮಹತ್ಯೆ ಮಾಡಿಕೊಂಡ ಯುವಕ.

ದುಬೈನಲ್ಲಿ ಉದ್ಯೋಗ ಮಾಡುತ್ತಿದ್ದ ದೀಕ್ಷಿತ್ ಕಳೆದ ಒಂದೂವರೆ ವಷ೯ಗಳಿಂದ ಊರಿನಲ್ಲಿಯೇ ಇದ್ದು ಹೊಟೇಲ್ ನಡೆಸುವ ಯೋಚನೆಯನ್ನು ಮಾಡಿದ್ದು ಅದಕ್ಕೆ ಪೂರಕವಾದ ಕೆಲಸಗಳನ್ನು ಮಾಡಿದ್ದರು. ತಾಯಿ ಅನಾರೋಗ್ಯ ಪೀಡಿತರಾಗಿದ್ದು, ಅವರ ಮಲಗಿದ್ದ ವೇಳೆ ಮನೆಯ ಕೋಣೆಯ ಕಿಟಕಿಗೆ ಶಾಲನ್ನು ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಮೂಡಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...