ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ಅಪಘಾತ ಬಸ್ ಪ್ರಯಾಣಿಕ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಯುವಕ ದಾರುಣ ಸಾವು.

Date:

ಸೌದಿ ಅರೇಬಿಯಾ: :ಸೆ -15
ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ಯುವಕನೋರ್ವನು ದಾರುಣ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಉಳ್ಳಾಲ ಮಿಲ್ಲತ್ ನಗರ ನಿವಾಸಿ ಮೊಹಮ್ಮದ್ ರವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟ ಯುವಕ.ಸೌದಿ ಅರೇಬಿಯಾದಲ್ಲಿದ್ದ ರಾಝಿಕ್ ನಿನ್ನೆ (ಭಾನುವಾರ) ಸಂಜೆ,ರಾತ್ರಿ ಪಾಳಿ ಕೆಲಸಕ್ಕೆಂದು ತೆರಳುತ್ತಿದ್ದಾಗ ರಾಝಿಕ್ ಪ್ರಯಾಣಿಸುತ್ತಿದ್ದ ಬಸ್ ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೊಹಮ್ಮದ್ ಅವರ ಕೊನೆಯ ಪುತ್ರನಾಗಿರುವ ರಾಝಿಕ್ ಸಿವಿಲ್ ಇಂಜಿನಿಯರಿಂಗ್ ಕೋರ್ಸ್ ಮುಗಿಸಿ ವಿದೇಶಕ್ಕೆ ತೆರಳಿದ್ದರು.ಜುಬೈಲ್ ನಲ್ಲಿ ಪೋಲಿಟೆಕ್ ಕಂಪೆನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಅವರು ಕಳೆದ ಜುಲೈ 11 ರಂದು ಊರಿಗೆ ಬಂದಿದ್ದರು.ಒಂದು ತಿಂಗಳ ರಜೆ ಮುಗಿಸಿ ಆಗಸ್ಟ್ 15 ರಂದು ಎರಡನೇ ಬಾರಿ ಮತ್ತೆ ವಿದೇಶಕ್ಕೆ ತೆರಳಿದ್ದರು.
ರಾಝಿಕ್ ಅವರ ಸಹೋದರ, ಹಾಗೂ ಸಹೋದರಿ ಅನಾರೋಗ್ಯದಿಂದ ಈ ಹಿಂದೆ ಮೃತಪಟ್ಟಿದ್ದರು. ಮೃತ ರಾಝಿಕ್ ತಂದೆ ತಾಯಿ,ಮೂವರು ಸಹೋದರಿಯರು,ಓರ್ವ ಸಹೋದರನನ್ನ ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...