
ಬಂಟ್ವಾಳ: ಸಜಿಪಮೂಡ ಗ್ರಾಮದ ಕಾರಜೆ, ಪಣೊಲಿಬೈಲ್, ಬೊಳ್ಳಾಯಿ, ಕಂಚಿಲ, ನಗ್ರಿ, ಜಾಡಕೊಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಮಿತಿ ಮೀರಿದೆ. ವಿಶೇಷವಾಗಿ ಬೊಳ್ಳಾಯಿ ಪೇಟೆ ಪ್ರದೇಶದಲ್ಲಿ ಶಾಲಾ-ಕಾಲೇಜು, ಮದ್ರಸ, ದೇವಾಲಯ, ಮಸೀದಿಗಳಿಗೆ ಬರುವ ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ನಾಯಿಗಳಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ.
ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರನ್ನು ಬೆನ್ನಟ್ಟಿ ಬೀದಿ ನಾಯಿಗಳು ಅಟ್ಟಾಡಿಸುವ ಘಟನೆಗಳು ಸಂಭವಿಸುತ್ತಿದ್ದು, ಯಾವುದೇ ಕ್ಷಣದಲ್ಲೂ ಗಂಭೀರ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು ಬೀದಿ ನಾಯಿಗಳ ನಿಗ್ರಹಕ್ಕಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಎಸ್‌ಡಿಪಿಐ ಬಂಟ್ವಾಳ ವಿಧಾನಸಭ ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್ ಬೊಳ್ಳಾಯಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.