ಮಂಗಳೂರು, ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪನೆಯ ಸಾಧ್ಯತೆಯನ್ನು ಪರಿಶೀಲಿಸಲು ಮೂವರು ನ್ಯಾಯಮೂರ್ತಿಗಳ ಸಮಿತಿ ರಚಿಸಿರುವ ಕರ್ನಾಟಕ ಹೈಕೋರ್ಟ್‌ನ ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ನಿರ್ಧಾರವನ್ನು ರೈಟ್ ಚಾಯ್ಸ್ ಸಂಸ್ಥೆಯ ಸಿಇಒ ಆಯಾಜ್ ಕೈಕಂಬ ಅವರು ಹೃತ್ಪೂರ್ವಕವಾಗಿ ಸ್ವಾಗತಿಸಿದ್ದಾರೆ.

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಕರಾವಳಿ ಭಾಗದ ಜನರಿಗೆ ನ್ಯಾಯವನ್ನು ಸುಲಭವಾಗಿ ಪಡೆಯಲು ಅನುಕೂಲವಾಗುವುದರ ಜೊತೆಗೆ, ಬೆಂಗಳೂರು ಸೇರಿದಂತೆ ದೂರದ ಸ್ಥಳಗಳಿಗೆ ತೆರಳಬೇಕಾದ ಅನಿವಾರ್ಯತೆ ಕಡಿಮೆಯಾಗಿ ಸಮಯ ಮತ್ತು ಆರ್ಥಿಕ ವೆಚ್ಚವೂ ಉಳಿತಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಮಂಗಳೂರು ಸೇರಿದಂತೆ ಕರಾವಳಿ ಭಾಗದ ವಕೀಲರು ಹಲವು ವರ್ಷಗಳಿಂದ ನಡೆಸುತ್ತಿರುವ ಪ್ರಯತ್ನಗಳು ಶ್ಲಾಘನೀಯವಾಗಿದ್ದು, ಈ ಮಹತ್ವದ ಪ್ರಕ್ರಿಯೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರು, ವಕೀಲರು ಹಾಗೂ ಎಲ್ಲಾ ಹಿತಾಸಕ್ತಿದಾರರು ಅಗತ್ಯ ಸಹಕಾರ ನೀಡಬೇಕು ಎಂದು ಆಯಾಜ್ ಕೈಕಂಬ ಮನವಿ ಮಾಡಿದ್ದಾರೆ.
ಕರಾವಳಿ ಕರ್ನಾಟಕದ ನ್ಯಾಯಾಂಗ ಸೇವೆಯನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಪ್ರಯತ್ನ ಯಶಸ್ವಿಯಾಗಲಿ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.
– ಆಯಾಜ್ ಕೈಕಂಬ
ಸಿಇಒ, ರೈಟ್ ಚಾಯ್ಸ್


