ವಿರಮಿಸಿ ಹಾಗೂ ನವಚೇತನ ಪಡೆಯಿರಿ’ ಆಳ್ವಾಸ್ ವಾಹನ ಚಾಲಕರಿಗೆ ವಿನೂತನ ಕಾಯ೯ಕ್ರಮ

Date:

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಮನಶಾಸ್ತ್ರ ವಿಭಾಗ ಹಾಗೂ ಆಳ್ವಾಸ್ ಸೆಂಟರ್ ಫಾರ್ ವೆಲ್‌ನೆಸ್ ಟ್ರೈನಿಂಗ್‌ವತಿಯಿಂದ ಪಿಜಿ ಸೆಮಿನಾರ್ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಸ್ ಚಾಲಕರಿಗಾಗಿ ‘ವಿರಮಿಸಿ ಹಾಗೂ ನವಚೇತನ ಪಡೆಯಿರಿ’ ಎಂಬ ವಿಶೇಷ ಕಾರ್ಯಗಾರ ನಡೆಯಿತು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ.ಕುರಿಯನ್ ಅವರು ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಐವತ್ತು ವರ್ಷಗಳ ಹಿಂದೆ ಚಾಲಕ ವೃತ್ತಿ, ಇಂದಿನ ವಿಮಾನದ ಪೈಲಟ್ ವೃತ್ತಿಯಂತೆ ಎಲ್ಲರಿಂದ ಮನ್ನಣೆಗೆ ಪಾತ್ರವಾಗಿತ್ತು. ಕಾಲಕ್ರಮೇಣ, ಈ ವೃತ್ತಿಯ ಪ್ರಾಮುಖ್ಯತೆ ಕಡಿಮೆಯಾಗುತ್ತಿದ್ದರೂ, ವಾಸ್ತವದಲ್ಲಿ ಇದು ಅತ್ಯಂತ ಜವಾಬ್ದಾರಿಯುತ ಹಾಗೂ ಸವಾಲಿನ ಕೆಲಸವಾಗಿದೆ.

ಚಾಲಕರು ದಿನನಿತ್ಯದ ಕೆಲಸದಲ್ಲಿ ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮಾನಸಿಕ ಆರೋಗ್ಯವನ್ನು ಸ್ಥಿರವಾಗಿರಿಸಿಕೊಂಡು ಕಾಳಜಿಯುತವಾಗಿರುವುದು ಬಹಳ ಮುಖ್ಯ. ವಾಹನದ ಕಾರ್ಬೋರೇಟರ್ ಹೀಟ್ ಆದಾಗ ನೀರು ಬಳಕೆ ಮಾಡುವಂತೆ, ಇಂಜಿನ್ ಆಯಿಲ್ ನಿಯಮಿತವಾಗಿ ಬದಲಿಸುವಂತೆ, ನಮ್ಮ ಮನಸ್ಸಿಗೂ ವಿಶ್ರಾಂತಿ ಮತ್ತು ಸಮರ್ಪಕ ಆರೈಕೆ ಅಗತ್ಯ ಎಂದರು.

ಆಳ್ವಾಸ್ ಸೆಂಟರ್ ಫಾರ್ ವೆಲ್‌ನೆಸ್ ಟ್ರೈನಿಂಗ್‌ನ ನಿರ್ದೇಶಕಿ ಡಾ. ದೀಪಾ ಕೊಠಾರಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಚಾಲಕರಿಗೆ ತಂಡ ನಿರ್ವಹಣೆ, ಸಮಸ್ಯೆ ಪರಿಹಾರ, ಒತ್ತಡ ನಿರ್ವಹಣೆ ಹಾಗೂ ಸಂವಹನದ ಕುರಿತು ವಿವಿಧ ಚಟುವಟಿಕೆಗಳನ್ನು ನಡೆಸಿದರು.ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾರಿಗೆ ಅಧಿಕಾರಿ ರೋಶನ್, ಆಳ್ವಾಸ್ ಪದವಿ ಕಾಲೇಜಿನ ಮನಶಾಸ್ತ್ರ ವಿಭಾಗದ ಮುಖ್ಯಸ್ಥೆ ಜೋಸ್ವಿಟಾ ಇದ್ದರು. ಪತ್ರಿಕೋದ್ಯಮ ವಿದ್ಯಾರ್ಥಿನಿ ಶ್ರೀವಲ್ಲಿ ಕಾಯ೯ಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...