ಉಳ್ಳಾಲ: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ದೇರಳಕಟ್ಟೆ
ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅನ್ಸಾರುಲ್ ಮುಸ್ಲಿಮೀನ್ ಕಚೇರಿಯಲ್ಲಿ ನಡೆಯಿತು.

ದೇರಳಕಟ್ಟೆ ಪಬ್ಲಿಕ್ ಸ್ಕೂಲ್
2024- 25 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ,ಪ್ರಶಸ್ತಿ ಪತ್ರ ಗೌರವಧನ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಒಂದು ವರ್ಷದ ಕಾರ್ಯವೈಖರಿಯನ್ನು ಮನಗಂಡು ನೀಡುವ ಸ್ಟಾರ್ ಆಫ್ ಅನ್ಸಾರ್ ಪ್ರಶಸ್ತಿಯನ್ನು ಸಂಸ್ಥೆಯ ಜೊತೆ ಕಾರ್ಯದರ್ಶಿ ಶಿಹಾಬುದ್ದೀನ್ .ಡಿ ಅವರಿಗೆ ನೀಡಿ ಗೌರವಿಸಲಾಯಿತು.

ಬದ್ರಿಯಾ ಜುಮಾ ಮಸೀದಿಯ ಖತೀಬ್ ತಾಜುದ್ದೀನ್ ರಹ್ಮಾನಿ ಉಸ್ತಾದ್ ದುಆ ನೆರವೇರಿಸಿ ಚಾಲನೆ ನೀಡಿದರು.
ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಆರ್ ಅಹ್ಮದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಅಧ್ಯಕ್ಷ ಇಲ್ಯಾಸ್ ಹಾಜಿ ದೇರಳಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಾ. ಅಬ್ದುಲ್ ಶಕೀಲ್, ಓಲ್ಡ್ ಸ್ಟೂಡೆಂಟ್ ಅಸೋಸಿಯೇಷನ್ ಅಧ್ಯಕ್ಷ ಪಿ.ಎಂ ಇಬ್ರಾಹಿಂ ಹಾಜಿ ಖತ್ತಾರ್,
ದೇರಳಕಟ್ಟೆ ಎಜುಕೇಶನ್ ಹಾಗೂ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಸಿದ್ದೀಕ್ ಡಿಎಂ, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಉಪಾಧ್ಯಕ್ಷ ಇಸ್ಮಾಯಿಲ್ ರಹಮತುಲ್ಲಾ, ಕೋಟಕಾರ್ ಪಟ್ಟಣ ಪಂಚಾಯತ್ ಮಾಜಿ ಕೌನ್ಸಿಲರ್ ಮೊಹಮ್ಮದ್ .ಡಿ ,ಬೆಳ್ಮ ಗ್ರಾ.ಪಂ ಸದಸ್ಯ ಇಕ್ಬಾಲ್ ಹೆಚ್ ಆರ್, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಹನೀಫ್ ಜೆ, ಜಲಾಲ್ ಬಾಗ್ ಫ್ರೆಂಡ್ಸ್ ಅಸೋಸಿಯೇಷನ್ ಅಧ್ಯಕ್ಷ ಹಸನ್ ಅಲಿ, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಮಾಜಿ ಉಪಾಧ್ಯಕ್ಷ ರಶೀದ್ ಡಿ.ಎಂ , ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಇದರ ಸದಸ್ಯರುಗಳು ಉಪಸ್ಥಿತರಿದ್ದರು
ಜೊತೆ ಕಾರ್ಯದರ್ಶಿ ಅಶ್ರಫ್ ಡಿಎ ಸ್ವಾಗತಿಸಿದರು . ಜೊತೆ ಕಾರ್ಯದರ್ಶಿ ಶಿಹಾಬುದ್ದೀನ್ ದೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಪ್ರ.ಕಾರ್ಯದರ್ಶಿ ಅಬ್ದುಲ್ ಮುತ್ತಲಿಬ್ ವಂದಿಸಿದರು.