ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

Date:

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ರೋಚಕವಾಗಿ ಸೋಲಿಸಿದ್ದಲ್ಲದೇ, 9ನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿದೆ.

ಟಾಸ್ ಗೆದ್ದಿದ್ದ ಸೂರ್ಯ ಕುಮಾರ್ ನೇತೃತ್ವದ ಟೀಮ್ ಇಂಡಿಯಾ, ಪಾಕಿಸ್ತಾನವನ್ನು ಬ್ಯಾಟಿಂಗ್‌ಗೆ ಇಳಿಸಿತ್ತು. ಟೀಮ್ ಇಂಡಿಯಾದ ಸಂಘಟಿತ ಬೌಲಿಂಗ್ ಅನ್ನು ಎದುರಿಸುವಲ್ಲಿ ವಿಫಲರಾದ ಪಾಕಿಸ್ತಾನ 19.1 ಓವರ್‌ ಆಗುವಷ್ಟರಲ್ಲಿ 146 ರನ್ ಗಳಿಸಿ ಆಲೌಟ್ ಆಗಿತ್ತು.

ಈ ಗುರಿಯನ್ನು ಬೆನ್ನಟ್ಟಿದ್ದ ಟೀಮ್ ಇಂಡಿಯಾ ಆರಂಭಿಕ ಆಘಾತ ಎದುರಿಸಿತ್ತಲ್ಲದೇ, 20 ರನ್ ಗಳಿಸುಷ್ಟರಲದಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತ್ತು. ಆ ಬಳಿಕ ಜೊತೆಯಾದ ಸಂಜು ಸ್ಯಾಮ್ಸನ್ ಹಾಗೂ ತಿಲಕ್ ವರ್ಮಾ 4 ನೇ ವಿಕೆಟ್‌ಗೆ ಸಾವಧಾನ ಜೊತೆಯಾಟ ನಡೆಸಿದರು. 77 ರನ್‌ಗಳಾಗುವಷ್ಟರಲ್ಲಿ 24 ರನ್ ಗಳಿಸಿದ್ದ ಸಂಜು ಔಟಾದರು. ಆ ಬಳಿಕ ಕ್ರೀಸ್‌ನಲ್ಲಿದ್ದ ತಿಲಕ್ ವರ್ಮಾಗೆ ಜೊತೆಯಾದ ಶಿವಂ ದುಬೆ 60 ರನ್‌ಗಳ ಜೊತೆಯಾಟ ನಡೆಸಿ, ಪಾಕ್ ಕೈಯಲ್ಲಿದ್ದ ಪಂದ್ಯವನ್ನು ಟೀಮ್ ಇಂಡಿಯಾ ಕಡೆಗೆ ವಾಲಿಸಿದರು.

ಕೊನೆಯ ಓವರ್‌ನಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 10 ರನ್‌ಗಳಿದ್ದಾಗ ಹಾರಿಸ್ ರೌಫ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಿಲಕ್ ವರ್ಮಾ ಗೆಲುವಿನ ಸನಿಹಕ್ಕೆ ತಂದು‌ ನಿಲ್ಲಿಸಿದರು. ಕೊನೆಯಲ್ಲಿ ರಿಂಕು ಸಿಂಗ್ ಬೌಂಡರಿ ಬಾರಿಸಿ ಗೆಲುವಿನ ರನ್ ದಾಖಲಿಸಿದರು.

ಟೀಮ್ ಇಂಡಿಯಾ 19.4 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು 150 ರನ್ ಗಳಿಸಿ, 9ನೇ ಬಾರಿಗೆ ಏಷ್ಯಾ ಕಪ್‌ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿತು.

2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಯಾವುದೇ ಪಂದ್ಯದಲ್ಲಿ ಸೋಲು ಅನುಭವಿಸಿಲ್ಲ. ಶ್ರೀಲಂಕಾ ವಿರುದ್ಧ ನಡೆದಿದ್ದ ಪಂದ್ಯವು ಟೈ ಆಗಿತ್ತಾದರೂ, ಟೀಮ್ ಇಂಡಿಯಾ ಸೂಪರ್ ಓವರ್‌ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತ್ತು.

ಫೈನಲ್ ಪಂದ್ಯದ ಬಳಿಕವೂ ಕೂಡ ಟೀಮ್ ಇಂಡಿಯಾ No Hand Shake Policy ಅನ್ನು ಮುಂದುವರಿಸಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...