ಎಲ್‌ಪಿಜಿ ಕೊರತೆ, ಬೆಲೆ ಏರಿಕೆ ವಿರುದ್ಧ ಆಟೋ ರಾಜಕನ್ಮಾರ್ ಯೂನಿಯನ್‌ನಿಂದ ಜಿಲ್ಲಾಧಿಕಾರಿಗೆ ಮನವಿ

Date:

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳಿಗೆ ಎಲ್‌ಪಿಜಿ ಅನಿಲದ ತೀವ್ರ ಕೊರತೆ ಮತ್ತು ಅನಿಯಂತ್ರಿತ ಬೆಲೆ ಏರಿಕೆಯನ್ನು ಖಂಡಿಸಿ ಆಟೋ ರಾಜಕನ್ಮಾರ್ ಯೂನಿಯನ್ (ರಿ) ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.

“ಜಿಲ್ಲೆಯಲ್ಲಿ ಎಲ್‌ಪಿಜಿ ಅನಿಲದ ಬೆಲೆ ಶೇ. 50ರಿಂದ 60ರಷ್ಟು ಏರಿಕೆಯಾಗಿದೆ. ಇದರಿಂದ ಆಟೋ ಚಾಲಕರ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದೆ. ಬೆಲೆ ಏರಿಕೆಯನ್ನು ತಕ್ಷಣ ನಿಯಂತ್ರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

“ಅನಿಲ ಪಂಪ್‌ಗಳಲ್ಲಿ ಸರಿಯಾದ ಸರಬರಾಜು ಇಲ್ಲದೆ ಚಾಲಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವಂತಾಗಿದೆ. ಇದರಿಂದ ದಿನದ ದುಡಿಮೆಯೂ ಇಲ್ಲದೆ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿದಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಅವರ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಸಮಸ್ಯೆಗಳು ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಯೂನಿಯನ್ ಎಚ್ಚರಿಸಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಯೂನಿಯನ್ ಅಧ್ಯಕ್ಷ ಅಬ್ದುಲ್ ಜಲೀಲ್ ಕೆ., ಪ್ರಧಾನ ಕಾರ್ಯದರ್ಶಿ ಶಫೀಕ್ ಬೋಳಿಯಾರ್, ಪದಾಧಿಕಾರಿಗಳಾದ ಶಖೀಕ್ ಸಾಲೆತ್ತೂರು, ಸಿದ್ದೀಕ್ ಕೊಡಕ್ಕಲ್, ಇಕ್ಬಾಲ್ ಮಾಡೂರು ಹಾಗೂ ಸಿರಾಜ್ ಇರಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...