ಅಯನಾ. ವಿ. ರಮಣ್ ಗೆ ಇಂಗ್ಲಿಷ್ ಎಮ್.ಎ ಯಲ್ಲಿ ಚಿನ್ನದ ಪದಕ

Date:

ಮೂಡುಬಿದಿರೆ: ಮೈಸೂರು ವಿಶ್ವವಿದ್ಯಾನಿಲಯವು 2024-25 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಎಮ್. ಎ ಪರೀಕ್ಷೆಯಲ್ಲಿ ಮೂಡುಬಿದಿರೆಯ ಅಯನಾ.ವಿ.ರಮಣ್ ಚಿನ್ನದ ಪದಕದೊಂದಿಗೆ ತೇರ್ಗಡೆಯಾಗಿದ್ದಾರೆ.
ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಈ ಉನ್ನತ ವ್ಯಾಸಂಗ ನಡೆಸಿದ ಅಯನಾ. ವಿ. ರಮಣ್ ‘ ಅಮೆರಿಕನ್ ಲಿಟರೇಚರ್’ ವಿಷಯದಲ್ಲಿ ಗೋಲ್ಡ್ ಮೆಡಲ್ ಗೆದ್ದ ಸಾಧನೆ ಮಾಡಿದ್ದಾರೆ.

ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿಯಾಗಿರುವ ಅವರು, ಆಳ್ವಾಸ್ ನ ಹಿರಿಯ ವಿದ್ಯಾರ್ಥಿಯಾಗಿದ್ದು, ರೋಟರಿ ಇಂಗ್ಲಿಷ್ ಮೀಡಿಯಮ್ ಸ್ಕೂಲ್ ನ ಹಳೆ ವಿದ್ಯಾರ್ಥಿಯಾಗಿದ್ದಾರೆ.

ಭರತನಾಟ್ಯದಲ್ಲಿ ವಿದ್ವತ್ ಪದವಿ ಯೊಂದಿಗೆ ದೂರದರ್ಶನ ಕಲಾವಿದೆಯಾಗಿಯೂ ಮಾನ್ಯತೆ ಪಡೆದಿರುವ ಅಯನಾ, ಸಿದ್ಧಕಟ್ಟೆಯಲ್ಲಿ ನಾಟ್ಯಾಯನ ಕಲಾ ಅಕಾಡೆಮಿ ಸ್ಥಾಪಿಸಿ ಭರತನಾಟ್ಯ ತರಗತಿ ನಡೆಸುತ್ತಿದ್ದು, ಆಳ್ವಾಸ್ ಉಪನ್ಯಾಸಕಿ
ಡಾ. ಮುಕಾಂಬಿಕಾ ಜಿ.ಎಸ್ ಮತ್ತು ಕಲಾವಿದ ಕೆ.ವಿ.ರಮಣ್ ದಂಪತಿಯ ಪುತ್ರಿಯಾಗಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಮುಂಬರುವ 106 ನೇ ಘಟಿಕೋತ್ಸವದಲ್ಲಿ ಅಯನಾ.ವಿ.ರಮಣ್ ಚಿನ್ನದ ಪದಕ ಸ್ವೀಕರಿಸಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...