ಶಬರಿಮಲೆ ಯಾತ್ರೆ ಕೈಗೊಂಡಿದ್ದ ಅಯ್ಯಪ್ಪ ಮಾಲಾಧಾರಿ ಹೃದಯಾಘಾತಕ್ಕೆ ಬಲಿ

Date:


ಉಳ್ಳಾಲ: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಸೋಮೇಶ್ವರದ ಪಿಲಾರು ದೇಲಂತಬೆಟ್ಟು ನಿವಾಸಿ ಚಂದ್ರಹಾಸ್ ಶೆಟ್ಟಿ (55) ಹೃದಯಾಘಾತದಿಂದ ನಿಧನರಾಗಿದ್ದಾರೆ.


ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚಂದ್ರಹಾಸ್ ಅವರು ಸಹಪಾಠಿ ಅಯ್ಯಪ್ಪ ಮಾಲಾ ವ್ರತಾಧಾರಿಗಳ ಜೊತೆ ಶನಿವಾರ ಅರ್ಕುಳ ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಇಂದು ಬೆಳಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.


ಚಂದ್ರಹಾಸ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಅವರು ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ನಾಳೆ ಬೆಳಗ್ಗೆ ಪಾರ್ಥಿವ ಶರೀರ ಉಳ್ಳಾಲ ತಲುಪಲಿದೆ. ಮೃತ ಚಂದ್ರಹಾಸ್ ಅವರು ಮೂಲತಃ ಬಾಕ್ರಬೈಲ್ ನಿವಾಸಿಯಾಗಿದ್ದು, ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಕಳೆದ ಹತ್ತು ವರ್ಷದಿಂದ ಪತ್ನಿಯ ಊರು ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು. ಇತ್ತೀಚೆಗಷ್ಟೆ ಪುತ್ರಿಯ ವಿವಾಹವನ್ನು ಅದ್ಧೂರಿಯಾಗಿ ನಡೆಸಿದ್ದರು. ಇದೀಗ ಶಬರಿಮಲೆ ತೆರಳಿದ್ದ ಚಂದ್ರಹಾಸ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದು ಕುಟುಂಬಸ್ಥರನ್ನು ಆಘಾತಕ್ಕೀಡು ಮಾಡಿದೆ. ಮೃತರು ಪತ್ನಿ, ಪುತ್ರಿ, ಪುತ್ರನನ್ನ ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...