ವಿದೇಶದಲ್ಲಿ ಉದ್ಯೋಗದ ಆಮಿಷ: ಆರೋಪಿಗೆ ಜಾಮೀನು

Date:

ಮೂಡುಬಿದಿರೆ: ವಿದೇಶದಲ್ಲಿ ವೈದ್ಯಕೀಯ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಮೂಡುಬಿದಿರೆ ಸೇರಿದಂತೆ ಜಿಲ್ಲೆಯ ಹಲವು ಭಾಗದ ಜನರಿಗೆ ಸುಮಾರು ₹1 ಕೋಟಿಗೂ ಅಧಿಕ ಹಣವನ್ನು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳ ಪೈಕಿ, ಪ್ರಮುಖ ಆರೋಪಿ ಮಹಿಳೆಗೆ ಮೂಡುಬಿದಿರೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.


ಬೆಂಗಳೂರು ಮೂಲದ ಪ್ರಕೃತಿ ಯು. (34) ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಈಕೆ ಹಾಗೂ ಆಕೆಯೊಂದಿಗೆ ವಂಚನೆಯಲ್ಲಿ ಭಾಗಿಯಾಗಿದ್ದ ಕುಂದಾಪುರದ ಗಂಗೊಳ್ಳಿ ಚರ್ಚ್ ರೋಡ್‌ನ ನಿವಾಸಿಯಾದ ಆಲ್ಟನ್ ರೆಬೆಲ್ಲೋ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದರು.


ಏನಿದು ವಂಚನೆ ಪ್ರಕರಣ?
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಿಗೆ ವಿದೇಶದಲ್ಲಿ ಆಕರ್ಷಕ ಉದ್ಯೋಗ ಮತ್ತು ಕೆಲಸದ ವೀಸಾಗಳನ್ನು ವ್ಯವಸ್ಥೆ ಮಾಡಿಕೊಡುವುದಾಗಿ ಆರೋಪಿಗಳು ನಂಬಿಸಿದ್ದರು. ಇದನ್ನು ನಂಬಿ ಅನೇಕ ಜನರು ದೊಡ್ಡ ಮೊತ್ತದ ಹಣವನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದರು. ಆದರೆ ಉದ್ಯೋಗಗಳು ದೊರೆಯದಿದ್ದಾಗ, ವಂಚನೆಗೊಳಗಾದವರು ಪೊಲೀಸರಿಗೆ ದೂರು ನೀಡಿದ್ದರು.
ಕಿನ್ನಿಗೋಳಿಯ ನಿವಾಸಿಯೊಬ್ಬರು ನೀಡಿದ ದೂರಿನನ್ವಯ, ಅವರ ಮಗನಿಗೆ ‘ನೆದರ್ ಲ್ಯಾಂಡ್’ನಲ್ಲಿ ವೈದ್ಯಕೀಯ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಲಾಗಿದೆ. ವೀಸಾ ಸಿಗದ ಕಾರಣ ಹಣ ಹಿಂದಿರುಗಿಸುವಂತೆ ಕೆವಿನ್ ಪಿಂಟೋ ಕೇಳಿದಾಗ, ಆರೋಪಿ ಪ್ರಕೃತಿ ಒಂದು ವಾರದಲ್ಲಿ ಹಣ ನೀಡುವುದಾಗಿ ಭರವಸೆ ನೀಡಿ ವಂಚಿಸಿದ್ದಳು.


ನಂತರ ಮಾಹಿತಿ ಕಲೆ ಹಾಕಿದಾಗ, ಪ್ರಕೃತಿ ಮತ್ತು ಆಕೆಯ ಸಹವರ್ತಿಯೊಬ್ಬಳು ಕಿನ್ನಿಗೋಳಿಯ ಯುವಕನಿಗೆ ಮಾತ್ರವಲ್ಲದೆ ಮೂಡುಬಿದಿರೆ ಸಹಿತ ಜಿಲ್ಲೆಯ ಹಲವರಿಗೆ ಇದೇ ರೀತಿ ವಂಚಿಸಿರುವುದು ತಿಳಿದು ಬಂದಿದೆ. ಮೂಡುಬಿದಿರೆಯಲ್ಲಿ ವಂಚನೆಗೆ ಒಳಗಾದವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆರೋಪಿ ಪ್ರಕೃತಿ ಪರವಾಗಿ ಮೂಡುಬಿದಿರೆಯ ಯುವ ವಕೀಲೆ ರೂಪಾ ಬಲ್ಲಾಳ್ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...