ಮಂಗಳೂರು: ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, 5ನೇ ವಾರ್ಡ್ ಅಡು ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುಲ್ಸಾನ್ ಕರೀಂ ಮತ್ತು 6ನೇ ಕ್ಷೇತ್ರದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ವೀಣಾ ಡಿಸೋಜಾ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ನೂತನವಾಗಿ ರಚನೆಯಾದ ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ತನ್ನ ಖಾತೆ ತೆರೆದಿದೆ.

ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಮಧ್ಯಾಹ್ನದ ವೇಳೆಗೆ ಎಲ್ಲ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ. ಆ ಮೂಲಕ ಬಜ್ಪೆ ಪಟ್ಟಣ ಪಂಚಾಯತ್ ಮೊದಲ ಆಡಳಿತ ಯಾರ ಪಾಲಿಗೆ ದೊರೆಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.


