ಬಜ್ಪೆ ಮುಹಿದ್ದೀನ್ ಜುಮಾ: ಖಾಝಿ ಸ್ವೀಕಾರ ಸಮಾರಂಭ

Date:

ಬಜ್ಪೆ: ಬಜ್ಪೆ ಮುಹಿದ್ದೀನ್ ಜುಮಾ ಮಸೀದಿಯ ನೂತನ ಖಾಝಿ ಯಾಗಿ ಸಯ್ಯಿದ್ ನಾಸಿರ್ ಅಬ್ದುಲ್ ಹಯ್ಯ್ ಶಿಯಾಬ್ ತಂಙಳ್ ಅವರು ಖಾಝಿ ಸ್ಥಾನವನ್ನು ಸ್ವೀಕರಿಸಿದರು.

ಈ ಹಿನ್ನೆಲೆಯಲ್ಲಿ ಬಜ್ಪೆ ಮುಹಿದ್ದೀನ್ ಜುಮಾ ಮಸೀದಿಯಲ್ಲಿ ನಡೆದ ಖಾಝಿ ಸ್ವೀಕಾರ ಸಮಾರಂಭದಲ್ಲಿ ಮಸೀದಿಯ ಆಡಳಿತ ಸಮಿತಿ ಹಾಗೂ ವಿವಿಧ ಹುದ್ದೆಗಳ ಪದಾಧಿಕಾರಿಗಳು, ಉಸ್ತಾದರು, ಜಮಾಅತ್ ಸದಸ್ಯರು ಮತ್ತು ಊರಿನ ಪ್ರಮುಖರು ಭಾಗವಹಿಸಿದ್ದರು.

ಸಮಾರಂಭದಲ್ಲಿ ನೂತನ ಖಾಝಿ ಯವರಿಗೆ ಗೌರವ ಹಾಗೂ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಲು ನೂತನ ಖಾಝಿ ಯವರಿಗೆ ಎಲ್ಲರ ಸಹಕಾರ ಮತ್ತು ಶುಭ ಹಾರೈಕೆಗಳನ್ನು ವ್ಯಕ್ತಪಡಿಸಲಾಯಿತು.

ಕಾರ್ಯಕ್ರಮವು ಗೌರವಪೂರ್ಣ ವಾತಾವರಣದಲ್ಲಿ ನೆರವೇರಿತು.

Send

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...