ಬೆಂಗಳೂರು: ಮಹಿಳೆಯನ್ನು ಕೊಂದು ಆಟೋದಲ್ಲಿ ಶವವಿಟ್ಟು ದುಷ್ಕರ್ಮಿ ಪರಾರಿ!

Date:

ಬೆಂಗಳೂರು : ಮಹಿಳೆಯನ್ನು ಕೊಂದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ ಆಗಿರುವಂತಹ ಘಟನೆ ಬೆಂಗಳೂರಿನ ತಿಲಕ್ನಗರ ಮುಖ್ಯರಸ್ತೆಯಲ್ಲಿ ನಡೆದಿದೆ. ಸಲ್ಮಾ(35) ಎಂಬ ಮಹಿಳೆಯನ್ನು ಪ್ರಿಯಕರ ಸುಬ್ಬುಮಣಿ ಕೊಂದು ಆಟೋದಲ್ಲಿ ಮೃತದೇಹ ಇಟ್ಟಿದ್ದ. ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯ ಕೇಸ್ ದಾಖಲಿಸಿಕೊಂಡು ತಿಲಕ್ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಿಲಕ್ನಗರ ಠಾಣಾ ವ್ಯಾಪ್ತಿಯಲ್ಲಿ ಸುಬ್ಬುಮಣಿ ವಾಸವಿದ್ದ. ಪತಿ ಮೃತಪಟ್ಟ ನಂತರ ಸುಬ್ಬುಮಣಿ ಜೊತೆ ಸಲ್ಮಾ ಸಲುಗೆಯಿಂದ ಇದ್ದರು. ನಿನ್ನೆ ರಾತ್ರಿ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸುಬ್ಬುಮಣಿ, ಸಲ್ಮಾ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಸಲ್ಮಾ ಮೃತದೇಹಕ್ಕೆ ಬಟ್ಟೆಸುತ್ತಿ ಕೆಟ್ಟುನಿಂತಿದ್ದ ಆಟೋದಲ್ಲಿಟ್ಟು ಪರಾರಿ ಆಗಿದ್ದಾನೆ.

ಆಟೋದಲ್ಲಿ ಮೃತದೇಹ ಇದ್ದುದನ್ನು ಗಮನಿಸಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಿಲಕ್ನಗರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಸದ್ಯ ಮರಣೋತ್ತರ ಪರೀಕ್ಷೆಗಾಗಿ ಸಲ್ಮಾ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...