ಬಂಟ್ವಾಳ: ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

Date:

ಅಳುವ ವರ್ಗ ಸಂವಿಧಾನದ ಮೌಲ್ಯಗಳನ್ನು ದುರ್ಬಲಗೊಳಿಸಲು ಯತ್ನಿಸುತ್ತಿರುವಾಗ, ಸಂವಿಧಾನ ರಕ್ಷಣೆಗೆ ಪಣತೊಡೋಣ: ರಿಯಾಝ್ ಫರಂಗಿಪೇಟೆ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ 77ನೇ ಗಣರಾಜ್ಯೋತ್ಸವದ ಪ್ರಯುಕ್ತ “ಸಂವಿಧಾನ ಮೌಲ್ಯಗಳ ರಕ್ಷಣೆ – ಗಣರಾಜ್ಯ ಸಂಭ್ರಮ” ಎಂಬ ಘೋಷವಾಕ್ಯದೊಂದಿಗೆ ದ್ವಜಾರೋಹಣ ಕಾರ್ಯಕ್ರಮವನ್ನು ಕೈಕಂಬ ಪಕ್ಷದ ಕಚೇರಿ ಮುಂಭಾಗದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಕ್ಷದ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಕ್ಷದ ಕಚೇರಿಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಇಂದು ಅಳುವ ವರ್ಗವು ಸಂವಿಧಾನ ನೀಡಿರುವ ಮೌಲ್ಯಗಳನ್ನು ದುರ್ಬಲಗೊಳಿಸಲು ನಿರಂತರವಾಗಿ ಯತ್ನಿಸುತ್ತಿದೆ. ಇಂತಹ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ರಕ್ಷಣೆಗೆ ಪಣತೊಟ್ಟು ನಿಲ್ಲಬೇಕು. ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಸೌಹಾರ್ದತೆಯಂತಹ ಸಂವಿಧಾನಾತ್ಮಕ ಮೌಲ್ಯಗಳನ್ನು ಕಾಪಾಡುವುದೇ ನಿಜವಾದ ಗಣರಾಜ್ಯೋತ್ಸವದ ಅರ್ಥ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಉಪಾಧ್ಯಕ್ಷೆ ಶಾಹೀದಾ ತಸ್ನೀಂ, ಜಿಲ್ಲಾ ಕೋಶಾಧಿಕಾರಿ ರಹೀಮ್ ಇಂಜಿನಿಯರ್, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು, ಕಲ್ಲಡ್ಕ ಬ್ಲಾಕ್ ಸಮಿತಿ ಅಧ್ಯಕ್ಷರಾದ ಸತ್ತಾರ್ ಕಲ್ಲಡ್ಕ ಹಾಗೂ ವಿಮನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶನೀರಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂತನವಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ರಿಯಾಝ್ ಫರಂಗಿಪೇಟೆ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಇರ್ಫಾನ್ ಕಾವಳಕಟ್ಟೆ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...