ಬಂಟ್ವಾಳ: ಶಾಲಾ ವಾಹನ ದುರಂತ ಪ್ರಕರಣ: ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

Date:

ಬಂಟ್ವಾಳ: ಬಂಟ್ವಾಳ ತಾಲೂಕಿನ ಬರಿಮಾರ್‌ನಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ಮಗು ಮೃತಪಟ್ಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

Oplus_131072

ಜುಲೈ 22ರಂದು ನಡೆದ ಅಪಘಾತದಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಾಹನದಲ್ಲಿದ್ದ ಮಗುವೊಂದು ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಈ ಸಂಬಂಧ ಆರಂಭದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 194ರಡಿ ಅಸಹಜ ಸಾವು (UDR) ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು. ಪ್ರಕರಣದ ತನಿಖೆ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ (RTO) ಪಡೆದ ವರದಿಯಲ್ಲಿ, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಶಾಲಾ ವಾಹನದ ವಿಮೆ (Insurance) ಹಾಗೂ ಅರ್ಹತಾ ಪ್ರಮಾಣಪತ್ರ (Fitness Certificate) ಚಾಲ್ತಿಯಲ್ಲಿರಲಿಲ್ಲ ಎಂಬುದು ಬೆಳಕಿಗೆ ಬಂದಿದೆ.

ಇದರ ಜೊತೆಗೆ, ಸದರಿ ವಾಹನವನ್ನು ಶ್ರೀರಾಮ ವಿದ್ಯಾಕೇಂದ್ರದ ಹೆಸರಿನಲ್ಲಿ ನೋಂದಣಿ ಮಾಡದೇ, ಬೇರೆ ಟ್ರಸ್ಟ್‌ನ ಹೆಸರಿನಲ್ಲಿ ನೋಂದಾಯಿಸಲಾಗಿತ್ತು ಎಂಬುದೂ ತನಿಖೆಯಲ್ಲಿ ಪತ್ತೆಯಾಗಿದೆ. ಅಗತ್ಯ ದಾಖಲೆಗಳಿಲ್ಲದೆ ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಬಳಸಿದ ಆರೋಪದಡಿ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 109/2026ರಲ್ಲಿ BNS ಕಲಂ 125 ಹಾಗೂ ಮೋಟಾರು ವಾಹನ ಕಾಯ್ದೆ (IMV Act) ಕಲಂ 196 ಮತ್ತು 192(1) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀಟ್ ವಿಷಯದಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ: ಅಕ್ಷಿತ್ ಸುವರ್ಣ ಆರೋಪ

ಮಂಗಳೂರು, ಜು.25: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ...

ಬಂಟ್ವಾಳದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ

ವಿದ್ಯಾರ್ಥಿಗಳು ಜೀವನ ಮೌಲ್ಯ ಹಾಗೂ ನೈತಿಕತೆಯನ್ನು ಮೈಗೂಡಿಸಿಕೊಳ್ಳಬೇಕು-ಎಸ್.ಎಲ್. ಭೋಜೇಗೌಡ ಬಂಟ್ವಾಳ: "ಶಿಕ್ಷಣ ಕ್ಷೇತ್ರವು...

ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ ಹಾಗೂ ತರಾತುರಿಯ ರಜೆ ಘೋಷಣೆ: ತಾಲೂಕುವಾರು ಹವಾಮಾನ ಪರಿಸ್ಥಿತಿ ಗಮನಿಸಲು ಎಸ್‌.ಎಲ್. ಭೋಜೆಗೌಡ ಆಗ್ರಹ

​ಮಂಗಳೂರು: ದ.ಕ ಮತ್ತು ಉಡುಪಿ ಜಿಲ್ಲೆಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದ್ದು, ಇಲ್ಲಿನ...