ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

Date:

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಬಿಸಿ ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿಯಲ್ಲಿ ಅಸೆಂಬ್ಲಿ ಪ್ರತಿನಿಧಿ ಸಭೆಯು ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್, “ನಿಜವಾದ ನಾಯಕತ್ವವು ಅಧಿಕಾರ ಮತ್ತು ಹುದ್ದೆಗಳಿಗಾಗಿ ಅಲ್ಲ; ಜನರ ಹಕ್ಕುಗಳು, ನ್ಯಾಯ ಹಾಗೂ ಸಮಾನತೆಯ ಪರವಾಗಿ ನಿರಂತರವಾಗಿ ಹೋರಾಡುವ ಮೂಲಕ ರೂಪುಗೊಳ್ಳುತ್ತದೆ. ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ಅಕ್ರಮ, ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯ ವಿರುದ್ಧ ಕಾರ್ಯಕರ್ತರು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.

ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ವ್ಯಾಪ್ತಿಯ ಗ್ರಾಮ, ವಾರ್ಡ್ ಹಾಗೂ ಬೂತ್ ಮಟ್ಟದಲ್ಲಿ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಬೇಕು. ಜನರ ಧ್ವನಿಯನ್ನು ಆಡಳಿತದ ಮುಂದೆ ಪರಿಣಾಮಕಾರಿಯಾಗಿ ಮಂಡಿಸುವ ಮೂಲಕ ಸಾರ್ವಜನಿಕ ಹಿತಾಸಕ್ತಿಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಕರೆ ನೀಡಿದರು.

ಸಮಾರೋಪ ಭಾಷಣವನ್ನು ಜಿಲ್ಲಾ ಕಾರ್ಯದರ್ಶಿ ನವಾಜ್ ಕಟ್ಟೆ ಮಾಡಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವುದು, ಜನಪರ ಹೋರಾಟಗಳನ್ನು ತೀವ್ರಗೊಳಿಸುವುದು ಹಾಗೂ ಜನರ ವಿಶ್ವಾಸ ಮತ್ತು ಬೆಂಬಲವನ್ನು ಗಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸೇವಾ ಮನೋಭಾವದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು. ಸಮಾಜದ ಎಲ್ಲ ವರ್ಗಗಳ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯದ ಸ್ಥಾಪನೆ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳ ಸಂರಕ್ಷಣೆಗಾಗಿ ಎಸ್‌ಡಿಪಿಐ ಕಾರ್ಯಕರ್ತರು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಅತಿಥಿಗಳಾಗಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮೂನಿಷ್ ಅಲಿ ಹಾಗೂ ಕಾರ್ಯದರ್ಶಿ ಅಶ್ರಫ್ ತಲಪಾಡಿ ಆಗಮಿಸಿದ್ದರು. ಸಭೆಯಲ್ಲಿ ಅಸೆಂಬ್ಲಿ ವ್ಯಾಪ್ತಿಯ ವಿವಿಧ ಬ್ಲಾಕ್, ವಾರ್ಡ್ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿ ಸಂಘಟನಾ ಬಲವರ್ಧನೆ, ಸದಸ್ಯತ್ವ ಅಭಿಯಾನ, ಜನಸಂಪರ್ಕ ಕಾರ್ಯಕ್ರಮಗಳು ಹಾಗೂ ಮುಂಬರುವ ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಿದರು.

ಪ್ರತಿನಿಧಿ ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಸಮಿತಿ ಸದಸ್ಯರಾಗಿ ಶರೀಫ್ ವಳವೂರು, ಹೈದರ್ ಕಾವಳಕಟ್ಟೆ, ಹಂಝ ನಂದಾವರ ಹಾಗೂ ಇಸ್ಮಾಯಿಲ್ ಬಾವ ಆಲಡ್ಕ ಅವರನ್ನು ಆಯ್ಕೆ ಮಾಡಲಾಯಿತು. ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್ ಬೊಳ್ಳಾಯಿ ಸ್ವಾಗತಿಸಿ, ಕ್ಷೇತ್ರ ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ ಧನ್ಯವಾದಗೈದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...