ಬ್ರೇಕಿಂಗ್ ನ್ಯೂಸ್: ಬೆಳ್ತಂಗಡಿ ಪತಿ ಹತ್ಯೆ ಪ್ರಕರಣ – ಕೊಲೆ ಸಾಬೀತಾದರೂ ಪತ್ನಿಗೆ ಶಿಕ್ಷೆ ಇಲ್ಲ: ಕೋರ್ಟ್ ತೀರ್ಪು

Date:

ಕೋರ್ಟ್ ತೀರ್ಪಿನ ಪೂರ್ಣ ವಿವರ ಇಲ್ಲಿದೆ


ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022ರಲ್ಲಿ ನಡೆದ ಪತಿ ಹತ್ಯೆ ಪ್ರಕರಣದ ತೀರ್ಪು ಇಂದು ಹೊರಬಿದ್ದಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -೧ (ಪೋಕ್ಸೋ) ದ ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು ಆರೋಪಿ ಎಲಿಯಮ್ಮ ಅವರನ್ನು ಅಪರಾಧಿಕ ಹೊಣೆಯಿಂದ ಮುಕ್ತಗೊಳಿಸಿದ್ದಾರೆ. ದಿನಾಂಕ 05-07-2022 ರಂದು ಬೆಳಿಗ್ಗೆ 5:30 ಕ್ಕೆ ಪತಿ ಯೋಹಾನನ್ ಅವರನ್ನು ಎಲಿಯಮ್ಮ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದರು.


ಪ್ರಮುಖ ಅಂಶಗಳು:


ವಿಚಾರಣೆ ವೇಳೆ ಆರೋಪಿ “ತಾನು ಕೊಂದಿರುವುದು ಹೌದು” ಎಂದು ಒಪ್ಪಿಕೊಂಡಿದ್ದರು. ಆದರೂ ನ್ಯಾಯಾಲಯ ಪೂರ್ಣ ಸಾಕ್ಷಿ ವಿಚಾರಣೆ ನಡೆಸಿತ್ತು. ಅಭಿಯೋಜನೆ ಪರ ಸಾಕ್ಷಿಗಳು ಕೃತ್ಯವನ್ನು ದೃಢಪಡಿಸಿದ್ದರು. ಆದರೆ, ಅಂತಿಮವಾಗಿ ಆರೋಪಿ ಪರ ವಕೀಲ ವಿಕ್ರಮ್ ರಾಜ್ ಎ. ಅವರು ನಡೆಸಿದ ಕ್ರಾಸ್ ಎಕ್ಸಾಮಿನೇಷನ್‌ನಲ್ಲಿ ಆರೋಪಿ “Delusional Disorder” ನಿಂದ ಬಳಲುತ್ತಿದ್ದರು ಎಂಬುದು ಸಾಬೀತಾಯಿತು. “ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ, ಆಕೆಗೆ ತಾನು ಮಾಡುತ್ತಿರುವ ಕೃತ್ಯ ತಪ್ಪು ಎಂಬ ಅರಿವು ಇರಲಿಲ್ಲ. ಆದ್ದರಿಂದ ಆಕೆ ಅಪರಾಧ ಎಸಗಿಲ್ಲ,” ಎಂದು ವಕೀಲರು ವಾದಿಸಿದ್ದರು.

ಈ ವಾದವನ್ನು ಮನ್ನಿಸಿದ ನ್ಯಾಯಾಧೀಶರಾದ ಮೋಹನ ಜೆ.ಎಸ್., ದಿನಾಂಕ 23-12-2025 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿದ್ದಾರೆ. ಎಲಿಯಮ್ಮ ಗಂಡನನ್ನು ಕೊಂದಿರುವುದು ಸಾಬೀತಾಗಿದೆ, ಆದರೆ ಆಕೆ ಮಾನಸಿಕ ಅಸ್ವಸ್ಥರಾಗಿದ್ದರಿಂದ ಅಪರಾಧಿಕ ಹೊಣೆ ಇಲ್ಲ ಎಂದು ತೀರ್ಪು ನೀಡಿದ್ದಾರೆ.

ತೀರ್ಪಿನ ಅನ್ವಯ, ಜೈಲು ಅಧೀಕ್ಷಕರು ಆರೋಪಿಯನ್ನು ನಿಮ್ಹಾನ್ಸ್‌ಗೆ (NIMHANS) ಕಳುಹಿಸಿ, ಆಕೆ ಬಿಡುಗಡೆಗೆ ಯೋಗ್ಯಳೇ ಮತ್ತು ಆಕೆ ತನಗೆ ಅಥವಾ ಸಮಾಜಕ್ಕೆ ಅಪಾಯಕಾರಿಯೇ ಎಂಬ ಬಗ್ಗೆ ವರದಿ ಪಡೆಯುವಂತೆ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ಆರೋಪಿ ಪರವಾಗಿ ನ್ಯಾಯವಾದಿಗಳಾದ ವಿಕ್ರಮ್ ರಾಜ್ ಎ ಮತ್ತು ಜೀವನ್ ಎ.ಎಂ. ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಮೀಫ್ ವಿದ್ಯಾರ್ಥಿಗಳ ಪಥ ಸಂಚಲನಾ ಸ್ಪರ್ಧೆಯ ಫಲಿತಾಂಶ ಪ್ರಕಟ

ಮಂಗಳೂರು, ಫೆ.18: ರಾಷ್ಟೀಯ ಹಬ್ಬಗಳ ಸಂದರ್ಭ ಮೀಫ್ ವಿದ್ಯಾ ಸಂಸ್ಥೆಗಳಲ್ಲಿ ಕಾರ್ಯಕ್ರಮ...

ಮದೀನಾ: ನ್ಯೂ ವೆಲ್ಫೇರ್ ಇಫ್ತಾರ್ ಕೂಟ ಫೆ.27ರಂದು

ಮದೀನಾ: ನ್ಯೂ ವೆಲ್ಫೇರ್ ಅಸೋಸಿಯೇಷನ್ ಮದೀನಾ ಮುನವ್ವರ ಇದರ ವತಿಯಿಂದ ಇಫ್ತಾರ್...

ಯುವವಾಹಿನಿ ಮೂಡಬಿದಿರೆ ಘಟಕದ ನೂತನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆ

ಮೂಡುಬಿದಿರೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನೂತನ...

ಮೂಡುಮಾನಾ೯ಡು ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ಮೂಡಬಿದಿರೆ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡು ಮಾರ್ನಾಡುವಿನಲ್ಲಿ ಮೆಟ್ರಿಕ್...