ಮಂಗಳೂರು ವಿ.ವಿ. ‘ಬಿತ್ತಿ’ ಗೋಡೆ ಬರಹ ಉದ್ಘಾಟನೆ

Date:

ಕೊಣಾಜೆ : ‘ಕನ್ನಡ ಭಾಷಾ ಅಧ್ಯಯನವು ಹಲವರಿಗೆ ಹೊಸ ಹೊಸ ಅವಕಾಶಗಳನ್ನು ಒದಗಿಸಿಕೊಟ್ಟಿದೆ, ನಾವು ಬೆಳೆಯುತ್ತಿರುವ ತಂತ್ರಜ್ಞಾನದ ಜೊತೆ ನಿಂತು ಕನ್ನಡವನ್ನು ಉಳಿಸುವ ಕೆಲಸವನ್ನು ಮಾಡಬೇಕು’ ಎಂದು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಅವರು ಹೇಳಿದರು.ಅವರು ಮಂಗಳೂರು ವಿ.ವಿ ಯ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರೋ. ಬಿ.ಎ.ವಿವೇಕ ರೈ ವಿಚಾರ ವೇದಿಕೆಯಲ್ಲಿ ನಡೆದ ಬಿತ್ತಿ ಗೋಡೆ ಬರಹ ಪತ್ರಿಕೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.ಇಂದು ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದು ನಿಂತಿರುವ ಅನೇಕ ಸಾಹಿತಿಗಳು ತಮ್ಮ ಆರಂಭದ ದಿನಗಳಲ್ಲಿ, ತಮ್ಮ ಶಾಲಾ – ಕಾಲೇಜುಗಳ ದಿನಮಾನಗಳಲ್ಲಿದ್ದಂತಹ ಸಂದರ್ಭದಲ್ಲಿ ಬಿತ್ತಿ ಗೋಡೆ ಬರಹದಂತ ಅನೇಕ ಬರವಣಿಗೆಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಅವುಗಳಲ್ಲಿ ಸಣ್ಣ – ಪುಟ್ಟ ಕವನ, ಲೇಖನಗಳಂತಹ ಇತ್ಯಾದಿಗಳನ್ನು ಬರೆದು ಪ್ರಕಟಿಸಿ, ಅವುಗಳ ನಿರಂತರ ಅಭ್ಯಾಸದಿಂದಲೇ ಇಂದು ದೊಡ್ಡ ದೊಡ್ಡ ಶ್ರೇಷ್ಠ ಸಾಹಿತಿಗಳಾಗಲು ಕಾರಣವಾಗಿದೆ ಎಂದು ಇವರು ಹೇಳಿದರು. ವಿಭಾಗದ ಮುಖ್ಯಸ್ಥರಾದ ಪ್ರೊ. ನಾಗಪ್ಪ ಗೌಡ ಆರ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ವಿಭಾಗದ ಪ್ರಾಧ್ಯಾಪಕರುಗಳಾದ ಪ್ರೊ. ಸೋಮಣ್ಣ ಹೊಂಗಳ್ಳಿ, ಡಾ. ಧನಂಜಯ ಕುಂಬ್ಳೆ, ಡಾ. ಯಶುಕುಮಾರ್ ಡಿ., ಬಿತ್ತಿ ಸಂಪಾದಕಿಯಾದ ಪ್ರಥ್ವಿ ಮತ್ತು ಉಪಸಂಪಾದಕರಾದ ಜಗದೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಥಮ ವರ್ಷದ ವಿದ್ಯಾರ್ಥಿನಿಯಾದ ಪವಿತ್ರ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಸಲೀಂ, ಮರಿಸಿದ್ದಪ್ಪ ಮತ್ತು ಶ್ರೇಯಸ್ ಕವನ ವಾಚನ ಮಾಡಿದರು. ಅಭಿಷೇಕ ವಾಲ್ಮೀಕಿ ಸ್ವಾಗತಿಸಿದರು, ಅನೂಪ್ ವಂದಿಸಿದರು, ರೇಷ್ಮಾ ಎನ್. ಬಾರಿಗ ಕಾರ್ಯಕ್ರಮವನ್ನು ನಿರೂಪಿಸಿದರು.

1 COMMENT

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...