ಬೈಕ್ ಢಿಕ್ಕಿ ಹೊಡೆದು ಗಂಭೀರಗೊಂಡಿದ್ದ ಪಾದಚಾರಿ ಸಾವು

Date:


vltvkannada.com ಉಳ್ಳಾಲ;ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ.
ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48)ಮೃತ ವ್ಯಕ್ತಿ.


ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಆ.15 ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಮೋಟಾರ್ ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಲೋಕೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾಯಂಕಾಲ ಮೃತಪಟ್ಟಿದ್ದಾರೆ.
ಘಟನೆ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಲೋಕೇಶ್ ಅವರು ಪತ್ನಿ,ಪುತ್ರಿಯನ್ನ ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...