ಬೋಳಂತೂರಿನಲ್ಲಿ ಬಿಕೆ ಬಾಯ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Date:

ಕಲ್ಲಡ್ಕ: ಬೋಳಂತೂರು ಬಿಕೆ ಬಾಯ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಂಗಾರಕೋಡಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಬಂಗಾರಕೋಡಿಯ ಮಹಮ್ಮದ್ ಕುಂಞಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಕೆ ಬಾಯ್ಸ್ ಅಧ್ಯಕ್ಷರಾದ ಮುಸ್ತಫಾ ಬಿ.ಕೆ. ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಕ್ಷಯ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕರಾದ ಕರೀಂ ಕದ್ಕರ್, ಅಕ್ಷಯ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಝಕರಿಯ ನಾರ್ಶ, ಎಸ್‌ಡಿಪಿಐ ಬೋಳಂತೂರು ಘಟಕದ ಸದಸ್ಯರಾದ ಅಶ್ರಫ್ ಬೋಳಂತೂರು, ಹಮೀದ್ ಟೈಲರ್ ಹಿರಿಯರಾದ ಇಬ್ರಾಹಿಂ ಶೆಡ್ಡ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಾಫರ್ ಅಶ್ ಅರಿಯ ಅವರು ಸ್ವಾತಂತ್ರ್ಯೋತ್ಸವದ ಮಹತ್ವದ ಕುರಿತು ಪ್ರಾಸಂಗಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿಜಿಪಿ ಸಕ್ರಿಯ ಕಾರ್ಯಕರ್ತ ಅಝೀಝ್ ಬಂಗಾರಕೋಡಿ ವಂದಿಸಿದರು. ಬಿಕೆ ಬಾಯ್ಸ್ ಇದರ ಗೌರವಾಧ್ಯಕ್ಷರದ ಮುಸ್ತಫಾ ಬೋಳಂತೂರು. ಅವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯರು ಹಾಗೂ ಬಿಕೆ ಬಾಯ್ಸ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...