ಬ್ರಹ್ಮಾಂಡ ಅಸ್ತ್ರದ ಸದುಪಯೋಗ ಅತ್ಯಗತ್ಯ: ಸಮ್ರೀನ್

Date:

ಮೂಡುಬಿದಿರೆ: ಕಲಾ ವಿಭಾಗದ ವಿದ್ಯಾರ್ಥಿಗಳು ಸಾಹಿತ್ಯ, ಇತಿಹಾಸ, ಭೂಗೋಳ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಹಾಗೂ ಇನ್ನಿತರ ವಿಷಯಗಳನ್ನು ಕಲಿಯುವುದರ ಜೊತೆಗೆ ಮಾನವೀಯ ಮೌಲ್ಯಗಳು, ವಿಶ್ಲೇಷಣಾ ದೃಷ್ಟಿಕೋನ ಮತ್ತು ತಾರ್ಕಿಕ ಚಿಂತನೆಯನ್ನು ಬೆಳೆಸಿಕೊಂಡಿರುತ್ತಾರೆ. ಹೀಗಾಗಿ ಈ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಅಗತ್ಯವಾದ ಬ್ರಹ್ಮಾಂಡ ಅಸ್ತ್ರವನ್ನು ತಮ್ಮ ವಿದ್ಯಾಭ್ಯಾಸದ ಹಂತದಲ್ಲೇ ಪಡೆದಿರುತ್ತಾರೆ ಎಂದು ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ನಿಯೋಜಿತ ವಾಣಿಜ್ಯ ತೆರಿಗೆ ನಿರೀಕ್ಷಕಿ ಸಮ್ರೀನ್ ತಯ್ಯಬಾ ಎಂ ಎಸ್ ನುಡಿದರು.

ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಲಾ, ಸಾಹಿತ್ಯ ಹಾಗೂ ಮತದಾರರ ಸಾಕ್ಷರತಾ ಸಂಘದ ವತಿಯಿಂದವಿದ್ಯಾಗಿರಿಯ ಡಾ.ಶಿವರಾಮ ಕಾರಂತ ಸಭಾಂಗಣದಲ್ಲಿ ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ ಕುರಿತು ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಲಾ ವಿಭಾಗದ ವಿದ್ಯಾರ್ಥಿಗಳು ಭಾಷಾ ಪಾಂಡಿತ್ಯ, ತಾರ್ಕಿಕ ಚಿಂತನೆ, ವಿಶ್ಲೇಷಣಾ ಸಾಮರ್ಥ್ಯ ಮತ್ತು ಸಾಮಾಜಿಕ ಅರಿವಿನ ಜೊತೆಗೆ ತಮ್ಮ ಪಠ್ಯಕ್ರಮವನ್ನು ಸಮರ್ಪಕವಾಗಿ ಅಧ್ಯಯನ ನಡೆಸಿದರೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಸಮರ್ಥರಾಗುತ್ತಾರೆ. ವಿದ್ಯಾರ್ಥಿಗಳು ಪ್ರತಿದಿನ ತಲಾ ಒಂದು ಕನ್ನಡ ಹಾಗೂ ಇಂಗ್ಲೀಷ್ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜೊತೆಗೆ, ಯೂಟ್ಯೂಬ್‌ನಲ್ಲಿ ಲಭ್ಯವಿರುವ ಅಧಿಕೃತ ವಿಡಿಯೋ ಸಿರೀಸ್‌ಗಳನ್ನು ಉಪಯೋಗಿಸಿ ಅಧ್ಯಯನವನ್ನು ನಡೆಸಿ ಎಂದು ಸಲಹೆ ನೀಡಿದರು. ಸರಕಾರದಿಂದ ಆಯೋಜಿಸಲ್ಪಡುವ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗಳ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ಕಲಾ ಸಂಘದ ಸಂಯೋಜಕ ದಾಮೋದರ ಇದ್ದರು.
ರ‍್ಯನ್ ಡಿಸೋಜಾ ನಿರೂಪಿಸಿ, ಭಾಗಮ್ಮ ಸ್ವಾಗತಿಸಿ, ನಿಧಿ ಅತಿಥಿಯನ್ನು ಪರಿಚಯಿಸಿ, ಲ್ಯಾನ್ಲೇಪಾ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...