ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಬರ್ಬರ ಹತ್ಯೆ: ವಿಮೆನ್ ಇಂಡಿಯಾ ಮೂವ್ಮೆಂಟ್‌ನಿಂದ ತೀವ್ರ ಖಂಡನೆ

Date:

ಬಂಟ್ವಾಳ (ಜು-16): ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದಿರುವ ಯುವತಿಯ ಬರ್ಬರ ಹತ್ಯೆ ಪ್ರಕರಣವನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ತೀವ್ರವಾಗಿ ಖಂಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶಿನೀರ ಅವರು, ಬಂಟ್ವಾಳ ಪರಿಸರದಲ್ಲಿ ಒಂದೇ ತಿಂಗಳೊಳಗೆ ಎರಡನೇ ಬಾರಿ ಇಂತಹ ಭೀಕರ ಘಟನೆ ಸಂಭವಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯ ಮೇಲೆ ಇಂತಹ ಕ್ರೂರ ಕೃತ್ಯ ಎಸಗಿರುವುದು ರಾಜ್ಯದ ಕಾನೂನು-ಸುವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮಹಿಳೆಯರು ಭಯಮುಕ್ತವಾಗಿ ಸಂಚರಿಸುವ ವಾತಾವರಣವನ್ನು ನಿರ್ಮಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರವು ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಪರಾಧಗಳನ್ನು ತಡೆಗಟ್ಟಲು ಕಠಿಣ ಕಾನೂನು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಜೊತೆಗೆ, ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಈ ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಿ, ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇಂತಹ ಅಮಾನವೀಯ ಹಾಗೂ ಹೇಯ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಪರಿಣಾಮಕಾರಿ ಮತ್ತು ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...