ಕೆ.ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ

Date:

ಮೂಡುಬಿದಿರೆ: ಕ್ಯಾನ್ಸರ್ ರೋಗವನ್ನು ಪ್ರಾರಂಭಿಕ ಹಂತದಲ್ಲೆ ಪತ್ತೆ ಹಚ್ಚಿ ಸಕಾಲದಲ್ಲಿ ಚಿಕಿತ್ಸೆ ನೀಡಿದರೆ ಗುಣಪಡಿಸಲು ಸಾಧ್ಯವಿದೆ. ಇಂತಹ ಕಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಮಹಿಳೆಯರಲ್ಲಿ ಕಂಡು ಬರುವ ಕ್ಯಾನ್ಸರ್ ಕಾಯಿಲೆಯ ತಪಾಸಣೆ ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿಯೆ ಕೆ.ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟನ್ನು ಪ್ರಾರಂಭಿಸಲಾಗಿದೆ ಎಂದು ಟ್ರಸ್ಟಿ ಡಾ. ಅಮರಶ್ರೀ ಹೇಳಿದರು.

ಅವರು ಗಾಂಧಿನಗರದ ಧನಲಕ್ಷ್ಮೀ ಕ್ಯಾಶ್ಯೂ ಫ್ಯಾಕ್ಟರಿಯ ಕಾರ್ಮಿಕರಿಗೆ ಕೆ.ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕ್ಯಾನ್ಸರ್ ತಪಾಸಣಾ ಶಿಬಿರವನ್ನುದ್ದೇಶಿಸಿ ಮಾತನಾಡಿದರು. ಕೆಲವು ರೋಗ ತಪಾಸಣೆಗೆ ದುಬಾರಿ ಖರ್ಚು ಆಗುತ್ತದೆ ಎಂದು ಹೆದರಿ ಬಡವರು ವೈದ್ಯರ ಬಳಿ ಹೋಗಲು ಹಿಂದೇಟು ಹಾಕುತ್ತಾರೆ. ಅಂತವರಿಗೋಸ್ಕರವೇ ನಾವು ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ನಡೆಸುತ್ತಿದ್ದೇವೆ. ಇದರ ಪ್ರಯೋಜನ ಎಲ್ಲರಿಗು ಸಿಗುವಂತ್ತಾಗಲಿ ಎಂದರು.

ಉದ್ಯಮಿ ಶ್ರೀಪತಿ ಭಟ್ ಮಾತನಾಡಿ ಅಮರನಾಥ ಶೆಟ್ಟಿ ಶಾಸಕರಾಗಿ, ಮಂತ್ರಿಯಾಗಿ ಜನ ನೆನಪಿಡುವಂತಹ ಸೇವೆಯನ್ನು ಮಾಡಿದ್ದಾರೆ. ಅವರ ಹೆಸರಿನಲ್ಲಿ ಪುತ್ರಿ ಅಮರಶ್ರೀ ಟ್ರಸ್ಟ್ ಆರಂಭಿಸಿ ಆರೋಗ್ಯ ಸೇವೆಯನ್ನು ಜನರಿಗೆ ನೀಡುತ್ತಿರುವುದು ಶ್ಲಾಘನಾರ್ಹ ಕಾರ್ಯ ಎಂದರು. ಟ್ರಸ್ಟಿ ಜಯಶ್ರೀ ಅಮರನಾಥ ಶೆಟ್ಟಿ, ಸತ್ಯನಾರಾಯಣ ಪೂಜಾ ಸಮಿತಿ ಗಾಂಧಿನಗರ ಇದರ ಅಧ್ಯಕ್ಷ ಜಯರಾಮ್ ಕೋಟ್ಯಾನ್, ಮಡಿವಾಳ ಸಮಾಜ ಸೇವಾ ಸಂಘದ ಪ್ರಮುಖ ಶ್ಯಾಮ್ ಮಡಿವಾಳ್, ಡಾ.ಮಹಿಮಾ ಮತ್ತು ಡಾ.ಪ್ರಾಪ್ತಿ ಉಪಸ್ಥಿತರಿದ್ದರು. ಶಂಕರ್ ಕೋಟ್ಯಾನ್ ನಿರೂಪಿಸಿ ದರು. ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್ ಕಾರ್ಯದರ್ಶಿ ಭರತ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...