ಮೂಡಬಿದಿರೆ “ಪತ್ರಿಕಾ ಭವನ” ಕ್ಕೆ ಮುಖ್ಯಮಂತ್ರಿಗಳಿಂದ ರೂ. 25 ಲಕ್ಷ ಅನುದಾನ ಮಂಜುರಾತಿಗೆ ಆದೇಶ

Date:

ಮೂಡಬಿದಿರೆ: ಇಲ್ಲಿನಪೇಟೆಯ ಹೃದಯ ಭಾಗದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮೂಡಬಿದಿರೆ ಪ್ರೆಸ್ ಕ್ಲಬ್ ವತಿಯಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪತ್ರಿಕಾ ಭವನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ 25 ಲಕ್ಷ ರೂಪಾಯಿ ಅನುದಾನ ಮಂಜೂರಾತಿಗೆ ಆದೇಶ ನೀಡಿದ್ದಾರೆ.

ಮೂಡಬಿದಿರೆ ಪ್ರೆಸ್‌ಕ್ಲಬ್ ನಿಯೋಗವು ಜನವರಿಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮೂಲಕ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ನೂತನ ಪತ್ರಿಕಾ ಭವನಕ್ಕೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ವಾರ್ತಾ ಮತ್ತು ಪ್ರಚಾರ ನಿರ್ದೇಶನಾಲಯಕ್ಕೆ ಒದಗಿಸಲಾದ ಅನುದಾನದಿಂದ ಪತ್ರಿಕಾ ಭವನ ನಿರ್ಮಾಣಕ್ಕೆ ಹಣ ಮಂಜೂರು ಮಾಡುವಂತೆ ಆಡಳಿತ ಇಲಾಖೆಗೆ ಆದೇಶ ನೀಡಿದ್ದಾರೆ ಎಂದು ಮೂಡಬಿದಿರೆ ಪ್ರೆಸ್‌ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...