ಜ್ನಾನೇಶ್ ಕುಮಾರ್ ರಾಜೀನಾಮೆ ಆಗ್ರಹಿಸಿ ತೊಕ್ಕೊಟ್ಟಿನಲ್ಲಿ ಯೂತ್ ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ

Date:


ಉಳ್ಳಾಲ: ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾದ ಜ್ನಾನೇಶ್ ಕುಮಾರನ್ನ ಕೂಡಲೇ ಬಂಧಿಸಬೇಕು ಅಥವಾ ವಜಾ ಮಾಡಬೇಕಿದೆ.ಯುವಜನತೆ ಎಚ್ಚೆತ್ತಾಗಲೇ ಎಸ್ ಐಆರ್ ಸಮಸ್ಯೆ ಬಗೆಹರಿಯಲು ಸಾಧ್ಯ.ಯೂತ್ ಕಾಂಗ್ರೆಸ್ ಸದಸ್ಯರು ಪ್ರತೀ ಕಾಲೇಜುಗಳಿಗೆ ತೆರಳಿ ಯುವ ಸಮುದಾಯವನ್ನ ಒಗ್ಗೂಡಿಸಿ ಎಸ್ ಐಆರ್ ವಿರುದ್ಧ ಪ್ರತಿಭಟಿಸಬೇಕಿದೆ.ಜ್ನಾನೇಶ್ ಅವರನ್ನ ಬಂಧಿಸದಿದ್ದರೆ ನಿರಂತರ ಧರಣಿ‌ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ ಅವರು ಎಚ್ಚರಿಕೆ ನೀಡಿದರು.


ಎಸ್ ಐಆರ್ ವಿರುದ್ಧ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ನಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಂಗಳೂರು ವಿದಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಜನತಂತ್ರದ ರಕ್ಷಣೆಗಾಗಿ ತೊಕ್ಕೊಟ್ಟು ಕೇಂದ್ರ ಬಸ್ಸು ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದ ಅಹೋರಾತ್ರಿ ಧರಣಿಯನ್ನುದ್ಧೇಶಿಸಿ ಅವರು ಮಾತನಾಡಿದರು.


ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್.ಗಟ್ಟಿ ಮಾತನಾಡಿ ಎಸ್ ಐಆರ್ ಪ್ರಕ್ರಿಯೆಯಲ್ಲಿ ದೇಶದಾದ್ಯಂತ ಕೋಟ್ಯಾಂತರ ಮತದಾರರ ಹೆಸರುಗಳನ್ನ ಅಳಿಸುವ ಕಾರ್ಯಕ್ಕೆ ಚುನಾವಣಾ ಆಯೋಗ ಕೈ ಹಾಕಿದೆ.ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ಮಾಡುವುದಾದರೆ,ಇವರು ಇನ್ನು ಯಾರನ್ನೂ ಬಿಡಲಾರರೆಂಬ ಪರಿಸ್ಥಿತಿ ಬಂದೊದಗಿದೆ.ಇಡೀ ದೇಶದ ಪ್ರಜೆಗಳ ಒಲಿತಿಗಾಗಿ ನಡೆಯುತ್ತಿರುವ ಪ್ರತಿಭಟನೆ ಇದಾಗಿದೆ.ಚುನಾವಣಾ ಆಯೋಗದ ಮುಖ್ಯಸ್ಥರಾದ ಜ್ನಾನೇಶ್ ಕುಮಾರ್ ಅವರು ರಾಜೀನಾಮೆ ಕೊಡಲೇ ಬೇಕಾಗಿದೆ.ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಯುವಶಕ್ತಿಯನ್ನು ಇಂದು ಓಟಿಗಾಗಿ ಸಂಗ್ರಾಮ ನಡೆಸುವ ಸ್ಥಿತಿಗೆ ಬಿಜೆಪಿಗರು ತಳ್ಳಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಬೋಳಿಯಾರ್,ಯೂತ್ ಕಾಂಗ್ರೆಸ್ನ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಮ್,ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮುಸ್ತಾಫ ಹರೇಕಳ,ಜಬ್ಬಾರ್ ಬೋಳಿಯಾರ್,ಗ್ಯಾರಂಟಿ ಅನುಷ್ಟಾನ ಸಮಿತಿ ತಾಲೂಕು ಅಧ್ಯಕ್ಷ ರಫೀಕ್ ಅಂಬ್ಲಮೊಗರು,ನರಿಂಗಾನ ಗ್ರಾ.ಪಂ ಮಾಜಿ ಅಧ್ಯಕ್ಷ ನವಾಝ್ ನರಿಂಗಾನ,ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಶೀರ್,ಇರಾ ಗ್ರಾ.ಪಂ ಮಾಜಿ ಅಧ್ಯಕ್ಷರಾದ ರಝಾಕ್ ಕುಕ್ಕಾಜೆ, ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಅಬ್ದುಲ್ ಶಕೀಲ್,ನಾಸಿರ್ ಸಾಮಾಣಿಗೆ,ಸಫ್ವಾನ್ ಕೆರೆಬೈಲು,ಮನ್ಸೂರ್ ಮಂಚಿಲ,ಪ್ರಕಾಶ್ ಪಿಂಟೊ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ವಿದಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನವಾಝ್ ನರಿಂಗಾನ ಸ್ವಾಗತಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...