ಡ್ರಗ್ಸ್ ವಿರುದ್ಧ ಕಾರ್ಯಾಚರಣೆಗೆ ಪೋಲಿಸ್ ಕಮಿಷನರ್ ಅವರನ್ನು ಅಭಿನಂದಿಸಿದ ದ.ಕ. ಜಿಲ್ಲಾ ಬಸ್ ಮಾಲೀಕರ ಸಂಘ

Date:

ಮಂಗಳೂರು: ದಕ ಜಿಲ್ಲೆಯಲ್ಲಿ ಮಾದಕ ದ್ರವ್ಯ ವ್ಯಸನಿಗಳನ್ನು ಹತೋಟಿಗೆ ತಂದು ಡ್ರಗ್ಸ್ ಮಾಫಿಯಾ ವಿರುದ್ಧ ಪ್ರಾಮಾಣಿಕವಾಗಿ ಹಾಗೂ ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾಫಿಯಾದ ಹುಟ್ಟಡಗಿಸಿದ ಮಂಗಳೂರು ನಗರದ ದಕ್ಷ ಪೊಲೀಸ್ ಕಮೀಷನರ್ ರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ ಅವರನ್ನು ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ಶ್ರೀ ಅಝೀಝ್ ಪರ್ತಿಪಾಡಿ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀ ರಾಮಚಂದ್ರ ಪಿಲಾರ್ ರವರು ಭೇಟಿಯಾಗಿ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಪರವಾಗಿ ಅಭಿನಂದಿಸಿದರು.

ನಮ್ಮ ಜಿಲ್ಲೆಯ ಇತಿಹಾಸದಲ್ಲಿ ಬಹುಮಟ್ಟಿಗೆ ಡ್ರಗ್ಸ್ ಮಾಫಿಯಾವನ್ನು ನಿಯಂತ್ರಿಸಿರುವುದರ ಬಗ್ಗೆ ಮೆಚ್ಚುಗೆ ಸೂಚಿಸಿದರು. ಹಾಗೂ ಇದರ ವಿರುದ್ಧ ಪೊಲೀಸ್ ಇಲಾಖೆಗೆ ಸಹಕಾರದ ಸಂಪೂರ್ಣ ಭರವಸೆ ನೀಡಿದರು.

ಹಾಗೂ ಮುಂದಿನವಾರ ಪೊಲೀಸ್ ಇಲಾಖೆ ಹಾಗೂ ರೋಶನಿ ನಿಲಯ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ಮಂಗಳೂರು ಕೇಂದ್ರ ಬಸ್ ನಿಲ್ದಾಣ, ಲಾಲ್ ಬಾಗ್, ತೊಕ್ಕೊಟ್ಟು, ಉಳ್ಳಾಲ, ತಲಪಾಡಿ ಬಾರ್ಡರ್ ಬಸ್ ನಿಲ್ದಾಣಗಳಲ್ಲಿ ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ (ಬೀದಿ ನಾಟಕ) ಕಾರ್ಯಕ್ರಮವನ್ನು ಹಮ್ಮಿಕೊಂಡು ಎಲ್ಲಾ ಬಸ್ಸುಗಳಲ್ಲೂ ಸ್ಟಿಕ್ಕರ್ ಹಾಕಿಕೊಂಡು ಪ್ರಮುಖ ಕೇಂದ್ರಗಳಲ್ಲಿ ಫ್ಲೆಕ್ಸ್ ಹಾಕಿ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘವು ಕಾರ್ಯಕ್ರಮವನ್ನು ಸಂಯೋಜಿಸುವುದೆಂದು ತಿಳಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...