ದಸರಾ ಉತ್ಸವ ಸಂದರ್ಭದಲ್ಲಿ ಅತ್ಯಾಚಾರಗೈದು ಕೊಲೆಗೈಯಲ್ಪಟ್ಟ ಬಾಲಕಿಗೆ ನ್ಯಾಯ ಹಾಗೂ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು: ವಿಮೆನ್ ಇಂಡಿಯಾ ಮೂವ್ಮೆಂಟ್

Date:

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ದಸರಾ ಉತ್ಸವ ಸಂದರ್ಭದಲ್ಲಿ ಜೀವನೋಪಾಯಕ್ಕಾಗಿ ಬಲೂನು ಮಾರಾಟ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ರಾಧಿಕಾ ಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣ, ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ನಿರಂತರವಾಗುತ್ತಿರುವ ಇಂತಹ ಹೇಯ ಕೃತ್ಯ ಗಳನ್ನು ಮಟ್ಟ ಹಾಕುವಲ್ಲಿ ನಮ್ಮ ವ್ಯವಸ್ಥೆಯು ವಿಫಲವಾಗಿರುವುದು ಖೇದಕರ.
ಪ್ರಕರಣದ ಆರೋಪಿಯನ್ನು ಶೀಘ್ರವೇ ಪತ್ತೆ ಹಚ್ಚಿ ಬಂಧಿಸಲಾಗಿದ್ದರೂ , ಆರೋಪಿಯನ್ನು ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸುವವರೆಗೆ ಬಾಲಕಿಗೆ ನ್ಯಾಯ ದೊರೆಯಲು ಸಾಧ್ಯವಿಲ್ಲ.
ಆದುದರಿಂದ ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಕೊಂಡು ಬಡ, ಮುಗ್ಧ ಹೆಣ್ಣು ಮಗುವಿಗೆ ನ್ಯಾಯ ಒದಗಿಸಬೇಕು. ಅಲ್ಲದೆ ಹೊಟ್ಟೆ ಪಾಡಿಗಾಗಿ ಊರಿಂದ ಊರಿಗೆ ವಲಸೆ ಹೋಗುವ ನಿರಾಶ್ರಿತರಿಗೆ , ವಿಶೇಷವಾಗಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಸೂಕ್ತವಾದ ವಸತಿ ಸೌಕರ್ಯಗಳನ್ನು ಒದಗಿಸಬೇಕು. ಮೃತ ಬಾಲಕಿಯ ಕುಟುಂಬಕ್ಕೆ ಶೀಘ್ರಶವಾಗಿ ಸೂಕ್ತ ಪರಿಹಾರ ನೀಡಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮೈಸೂರು ಜಿಲ್ಲಾಧ್ಯಕ್ಷೆ ಝರೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...