ದೇವಿನಗರಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ಕಾರ್ಡ್ ನೋಂದಣಿ ಶಿಬಿರ

Date:

ಉಳ್ಳಾಲ: ತಲಪಾಡಿ ದೇವಿನಗರ ಶ್ರೀ ಅವಿನಾಶಿ ಭಜನಾ ಮಂದಿರ ಹಾಗೂ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಸಹಯೋಗದಲ್ಲಿ ಭಾನುವಾರ ಶ್ರೀ ಅವಿನಾಶಿ ಭಜನಾ ಮಂದಿರದಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಿತು.ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಿ, ಕೇಂದ್ರ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಆಅಜಠನರಿಗೆ ಅರಿವು ಮೂಡಿಸುವ ಕೆಲಸ ಅಗತ್ಯ, ಭಜನಾ ಮಂದಿರದಿಂದ ಅಯೋಜಿಸಿರುವ ಕಾರ್ಯಕ್ರಮದ ಮೂಲಕ ಹಿಂದೂ ಸಮಾಜ,‌ ಹಿಂದುತ್ವಕ್ಕೆ ಶಕ್ತಿ ಕೊಡುವ ಕೆಲಸ ಆಗಲಿ ಎಂದು ಹೇಳಿದರು.ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕೂವೆತ್ತಬೈಲ್ ಮಾತನಾಡಿ, ಪ್ರಧಾನಿ ಮೋದಿಯವರು 1800 ಯೋಜನೆಗಳನ್ನು ಜಾರಿಗೆ ತಂದಿದ್ದು ಜನಸಾಮಾನ್ಯರಿಗೆ ತಿಳಿಸಬೇಕಾದರೆ ಸಂಘ-ಸಂಸ್ಥೆಗಳು ಕಾರ್ಯಕ್ರಮ ನಡೆಸುವ ಮೂಲಕ ಸಹಕಾರ ನೀಡಬೇಕು ಎಂದು ಹೇಳಿದರು. ಅಂಚೆ ಇಲಾಖೆಯ ನಿರೀಕ್ಷಕಿ ಸುಪ್ರಿಯಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಪ್ರಗತಿಪರ ಕೃಷಿಕ ನಾರಾಯಣ ಕಿಲ್ಲೆ, ಕಿನ್ಯ ಕೇಶವ ಶಿಶು ಮಂದಿರದ ವ್ಯವಸ್ಥಾಪಕ ನಾರಾಯಣ ಕಜೆ, ಬಿಜೆಪಿ ಮಂಜನಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಿತ್ಯಾನಂದ ಭಂಡಾರಿ, ಅವಿನಾಶಿ ಮಹಾದೇವ ಭಜನಾ ಮಂದಿರದ ಅಧ್ಯಕ್ಷ ಯುವರಾಜ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು. ತಲಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು ಸ್ವಾಗತಿಸಿದರು. ಕ್ರೀಡಾ ಸಂಚಾಲಕ ಅಶ್ವಿತ್ ವಂದಿಸಿದರು. ಗೋಪಾಲ ಕೃಷ್ಣ ಮೇಲಾಂಟ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...