ಮೂಡಬಿದಿರೆ ಶ್ರೀ ಧವಲಾ ಕಾಲೇಜಿನಲ್ಲಿ ‘ಧವಲಾ ಸಿರಿ-2026’ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ

Date:

ಶಿಕ್ಷಣದ ಜತೆಗೆ ಕಲೆಯನ್ನು ಬೆಳೆಸಿಕೊಳ್ಳಿ: ಪ್ರಸನ್ನ ಶೆಟ್ಟಿ ಬೈಲೂರು

ಮೂಡುಬಿದಿರೆ: ಶಿಕ್ಷಣ ಪ್ರತಿಯೊಬ್ಬರಿಗೂ ಬೇಕು. ಪ್ರತಿಯೊಬ್ಬ ವಿದ್ಯಾಥಿ೯ಯಲ್ಲೂ ಒಬ್ಬ ಕಲಾವಿದನಿರುತ್ತಾನೆ ಆದ್ದರಿಂದ ವಿದ್ಯಾಥಿ೯ಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿನೆಮಾ ನಟ ಹಾಗೂ ಸಂಭಾಷಣಕಾರ ಪ್ರಸನ್ನ ಶೆಟ್ಟಿ ಬೈಲೂರು ಹೇಳಿದರು.

ಅವರು ಶ್ರೀ ಧವಲಾ ಕಾಲೇಜಿನಲ್ಲಿ ಲಲಿತಕಲಾ ಸಂಘದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಧವಲಾ ಸಿರಿ – 2026’ ಅನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಈ ಸಾಂಸ್ಕೃತಿಕ ಹಬ್ಬ ಸಹಕಾರಿಯಾಗಲಿದೆ ಎಂದರು. ಡಿಜೆವಿವಿ ಸಂಘದ ಕಾಯ೯ದಶಿ೯ ಅಭಿಜಿತ್ ಎಂ. ಅಧ್ಯಕ್ಷತೆ ವಹಿಸಿದ್ದರು.

ಸನ್ಮಾನ : ಇದೇ ಸಂದಭ೯ದಲ್ಲಿ ಕಲಾವಿದ ಪ್ರಸನ್ನ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಉದ್ಯಮಿಗಳಾದ ಬೆನೆಡಿಕ್ಟಾ ಸೆರ್ರ, ವಿಶ್ರಾಂತ ಪ್ರಾಂಶುಪಾಲ ಅಜಿತ್ ಪ್ರಸಾದ್ ಜೈನ್, ಪ್ರದೀಪ್ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿದ್ಯಾಥಿ೯ ನಾಯಕ ಸುಶಾಂತ್, ಜತೆ ಕಾಯ೯ದಶಿ೯ ಸೃಜನ್ ಶೆಟ್ಟಿ ಉಪಸ್ಥಿತರಿದ್ದರು.ಪ್ರಾಂಶುಪಾಲ ಪಾಶ್ವ೯ನಾಥ ಅಜ್ರಿ ಸ್ವಾಗತಿಸಿದರು. ಕಾಯ೯ಕ್ರಮದ ಸಂಯೋಜಕಿ ಮಲ್ಲಿಕಾ ರಾವ್ ಪ್ರಸನ್ನ ಶೆಟ್ಟಿ ಅವರನ್ನು ಪರಿಚಯಿಸಿದರು.ವೀಕ್ಷಿತಾ ಮತ್ತು ಶ್ರೇಯ ಕಾಯ೯ಕ್ರಮ ನಿರೂಪಿಸಿದರು. ಲಲಿತಾ ಕಲಾ ಸಂಘದ ಕಾಯ೯ದಶಿ೯ ಪ್ರಜ್ವಲ್ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...