ಶ್ರೀ ಮಹಾವೀರ ಕಾಲೇಜಿನಲ್ಲಿ ಸಂವಾದ ಕಾಯ೯ಕ್ರಮ

Date:

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಎಸ್.ಎಂ.ಸಿ. ಕೋಡಿಂಗ್ ಮತ್ತು ಎಐ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ “ಕೃತಕ ಬುದ್ಧಿಮತ್ತೆ (AI) ಮತ್ತು ಹೊಸಬಗೆಯ ತಂತ್ರಜ್ಞಾನಗಳ ಉದ್ಯಮದ ದೃಷ್ಟಿಕೋನ ಹಾಗೂ ಎಲ್ಲ ವಿಭಾಗದ ವಿದ್ಯಾರ್ಥಿಗಳಿಗೂ ಟೆಕ್ ವೃತ್ತಿ ಅವಕಾಶಗಳ” ಕುರಿತು ಸಂವಾದ ಕಾರ್ಯಕ್ರಮವು ಶನಿವಾರ ನಡೆಯಿತು.

ಕಾಲೇಜಿನ ಹಳೆ ವಿದ್ಯಾರ್ಥಿ, ಕ್ಷೌಡೆರಾ ಇನ್ಕಾರ್ಪೊರೇಷನ್‌ನ ಪ್ರಧಾನ ಎಂಜಿನಿಯರ್ ವಾದಿರಾಜ ಭಟ್ ಮಾತನಾಡಿ “ಇಂದು ಕಲೆ, ವಿಜ್ಞಾನ, ವಾಣಿಜ್ಯ ಎಂಬ ಗಡಿಗಳನ್ನು ಮೀರಿ ಎಲ್ಲ ವಿಷಯಗಳ ಕುರಿತು ಎಲ್ಲರೂ ತಿಳಿವಳಿಕೆಯನ್ನು ಹೊಂದಿರಬೇಕು. ಅಂಕಗಳಿಗಿಂತ ನಮ್ಮ ಕೌಶಲ್ಯ, ಬುದ್ಧಿಮತ್ತೆ ಮತ್ತು ಸೃಜನಶೀಲ ಆಲೋಚನೆಗಳ ಮೂಲಕ ಉದ್ಯೋಗದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಕೃತಕ ಬುದ್ಧಿಮತ್ತೆಯು ನಮಗೆ ಮಾರ್ಗದರ್ಶನ ಮಾಡಲು ಮತ್ತು ನಮ್ಮ ಕೆಲಸಗಳನ್ನು ಇನ್ನಷ್ಟು ವೇಗವಾಗಿ ಮಾಡಲು ಸಹಾಯಕವಾಗಿದೆ ಎಂದ ಅವರು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಕ್ಷೇತ್ರದ ಪ್ರಸ್ತುತ ಮತ್ತು ಭವಿಷ್ಯದ ಅವಕಾಶಗಳನ್ನು ವಿವರಿಸಿದರು.

ಹಳೆ ವಿದ್ಯಾರ್ಥಿ ಹಾಗೂ ಮೈಂಡ್‌ಫುಲ್ ಕನ್ಸಲ್ಟಿಂಗ್‌ನ ಸಂಸ್ಥಾಪಕ ಸಂಜಯ್ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪಿ.ಯು. ಪ್ರಾಂಶುಪಾಲೆ ಲೆ. ವಿಜಯಲಕ್ಷ್ಮಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರೀಶ್, ಸಂಯೋಜಕಿ ಗಣಕ ಶಾಸ್ತ್ರ ಉಪನ್ಯಾಸಕಿ ಕೀರ್ತಳ ಉಪಸ್ಥಿತರಿದ್ದರು.

ಕೋಡಿಂಗ್ ಕ್ಲಬ್ ವಿದ್ಯಾರ್ಥಿ ಪ್ರತಿನಿಧಿ ಕುಶಾಗ್ರ ಸ್ವಾಗತಿಸಿದರು. ಕಲಾ ವಿಭಾಗದ ವಿದ್ಯಾರ್ಥಿನಿ ನೆಬೀಸತ್ ರಿಹಾನಾ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಗಣಕಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರತಿಷ್ಠಾ ಜೈನ್ ಕಾರ್ಯಕ್ರಮ ನಿರೂಪಿಸಿದರು. ವಿಜ್ಞಾನ ವಿಭಾಗದ ರಕ್ಷಿತಾ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...