ಮೂಡುಬಿದಿರೆ : ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಸಾಧನೆಯನ್ನು ಗುರುತಿಸಿ 2025ನೇ ಸಾಲಿನ ಪ್ರತಿಷ್ಠಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ ಮಂಗಳೂರು , ಇದರ ಅಧ್ಯಕ್ಷ ಮಯೂರ್ ಉಳ್ಳಾಲ್ ಅವರನ್ನು ಸಂಘದ ಮಾಸಿಕ ಸಭೆಯಲ್ಲಿ ಮೂಡುಬಿದಿರೆ ಕುಲಾಲ ಸಂಘದವರು ಗೌರವಿಸಿದರು.

ಕುಲಾಲ ಸಂಘ ಮೂಡುಬಿದಿರೆ ಗೌರವಾಧ್ಯಕ್ಷ ಶಂಕರ್ ಕುಲಾಲ್, ಕುಲಶೇಖರ ವೀರನಾರಾಯಣ ದೇವಸ್ಥಾನ ಸಮಿತಿಯ ಅಧ್ಯಕ್ಷ ಸುಂದರ ಕುಲಾಲ್, ಶ್ರೀದೇವಿ ದೇವಸ್ಥಾನದ ಅಧ್ಯಕ್ಷ ಸದಾಶಿವ ಕುಲಾಲ್, ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


