ಡಾ. ಡಿ. ವಿರೇಂದ್ರ ಹೆಗ್ಗಡೆ ಜನ್ಮ ದಿನಾಚರಣೆ: ಸ್ಪೂತಿ೯ ವಿಶೇಷ ಶಾಲೆಯ ಮಕ್ಕಳಿಗೆ ಆಹಾರ ಸಾಮಾಗ್ರಿ ವಿತರಣೆ

Date:

ಮೂಡುಬಿದಿರೆ: ಶ್ರೀ ಕ್ಷೇತ್ರ ಧಮ೯ಸ್ಥಳದ ಧಮಾ೯ಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಮೂಡುಬಿದಿರೆ ತಾಲೂಕು ವತಿಯಿಂದ ಬೆಳುವಾಯಿಯ ಸ್ಫೂರ್ತಿ ಭಿನ್ನ ಸಾಮರ್ಥ್ಯ ಹಾಗೂ ತರಬೇತಿ ಕೇಂದ್ರದ 91 ಮಕ್ಕಳಿಗೆ ಆಹಾರ ಸಾಮಗ್ರಿ ಹಾಗೂ ಹಣ್ಣು ಹಂಪಲನ್ನು ಮಂಗಳವಾರ ವಿತರಿಸಲಾಯಿತು.

ತಾಲೂಕಿನ ಯೋಜನಾಧಿಕಾರಿ ಧನಂಜಯ ಅವರು ಆಹಾರ ಸಾಮಾಗ್ರಿ ವಿತರಣೆ ಮಾಡಿ ಮಕ್ಕಳಿಗೆ ಶುಭ ಹಾರೈಕೆಗೈದರು. ವಿಶೇಷ ಮಕ್ಕಳು ಹೆಗ್ಗಡೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿದರು. ಗ್ರಾಮಾಭಿವೃದ್ಧಿ ಯೋಜನೆಯ ಲೆಕ್ಕ ಪರಿಶೋಧಕ ನಾಗೇಶ್, ವಿಶೇಷ ಶಾಲೆಯ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪ್ರಕಾಶ್ ಜೆ.ಶೆಟ್ಟಿಗಾರ್, ಸಂಸ್ಥೆಯ ಮುಖ್ಯ ಶಿಕ್ಷಕಿ ಶರ್ಮಿಳಾ ವಾಸ್, ಸಹಾಯಕ ಆಡಳಿತ ಅಧಿಕಾರಿ ಅನಿತಾ ರೋಡ್ರಿಗಸ್, ಒಕ್ಕೂಟದ ಅಧ್ಯಕ್ಷ ಸಂತೋಷ್, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹರೀಶ್ ಮಾಂಬಾಡಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಮಡಂತ್ಯಾರಿನ ಕಲಾಸಭಾಂಗಣದಲ್ಲಿ ಭಾನುವಾರ ಮಡಂತ್ಯಾರು ಜೇಸಿ ಆಯೋಜಿಸಿದ ಜೇಸಿ ವಲಯ 15ರ...

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...