ಡಾ.ಡಿ.ಎ.ಶಂಕರ್ ಮೈಸೂರು ಅವರಿಗೆ 2025ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

Date:

ಮಂಗಳೂರು: ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆ ಎಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ.

ಈ ಸಾಲಿನ ಸ್ಪರ್ಧೆಗೆ ಒಟ್ಟು ೨೮ ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್) ಮತ್ತು ಹೊಸ ಪೀಳಿಗೆಯ ವಿಮರ್ಶಕರಾದ ವಿಕಾಸ ಹೊಸಮನಿ ಹಾವೇರಿ ಹಾಗೂ ಡಾ. ಸುಭಾಷ್ ಪಟ್ಟಾಜೆ, ಕಾಸರಗೋಡು ಅವರು ನೀಡಿದ ಅಂಕಗಳ ಆಧಾರದಲ್ಲಿ ಈ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
೧೯೭೯ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ಹತ್ತು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ೨೦೨೬ರ ಫೆಬ್ರವರಿ ತಿಂಗಳಲ್ಲಿ ಪ್ರಶಸ್ತಿಯ ಪ್ರಾಯೋಜಕರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರ ನೇತೃತ್ವದಲ್ಲಿ ನೆರವೇರಲಿರುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...