ಮರಾಟಿ ಸಮಾಜ ಸೇವಾ ಸಂಘದಿಂದ ಶೈಕ್ಷಣಿಕ ಕಾಯ೯ಗಾರ

Date:

ಮೂಡುಬಿದಿರೆ: ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಮಂಗಳೂರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಕೆನರಾ ಬ್ಯಾಂಕ್ ಬೆಂಗಳೂರು ಹಾಗೂ ಮರಾಟಿ ಸಮಾಜ ಸೇವಾ ಸಂಘ ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶೈಕ್ಷಣಿಕ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಚಂಡೀಗಢ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಒಕ್ಕೂಟದ ಗೌರವಾಧ್ಯಕ್ಷರಾದ ಎಚ್. ರಾಜೇಶ್ ಪ್ರಸಾದ್ ಐಎಎಸ್ ಅವರು, ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಂಭೀರವಾಗಿ ತಯಾರಿ ನಡೆಸಬೇಕು. ಶಿಸ್ತು, ಆತ್ಮವಿಶ್ವಾಸ ಮತ್ತು ನಿರಂತರ ಅಧ್ಯಯನವೇ ಯಶಸ್ಸಿನ ಮೂಲಮಂತ್ರ ಎಂದು ಹೇಳಿದರು. ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬೆಳೆಯುವತ್ತ ಯುವಕರು ದೃಢ ಸಂಕಲ್ಪದೊಂದಿಗೆ ಮುಂದಾಗಬೇಕೆಂದು ಕರೆ ನೀಡಿದರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಮಂಗಳೂರು ಅಧ್ಯಕ್ಷ ಡಾ. ಕೆ. ಸುಂದರ ನಾಯ್ಕ್ ವಹಿಸಿದ್ದರು.

ಈ ಸಂದರ್ಭದಲ್ಲಿ ಮರಾಟಿ ಸಮುದಾಯಕ್ಕೆ ನೀಡಿದ ಸೇವೆಯನ್ನು ಪರಿಗಣಿಸಿ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಮ ನಾಯ್ಕ್ ಕೆ. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಮ ನಾಯ್ಕ್ ಕೆ., ಸಂಪನ್ಮೂಲ ವ್ಯಕ್ತಿ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಒಕ್ಕೂಟದ ಪ್ರದಾನ ಕಾರ್ಯದರ್ಶಿ ವಾಸು ನಾಯ್ಕ್, ಮೂಡುಬಿದಿರೆ ಮರಾಟಿ ಸಂಘದ ಅಧ್ಯಕ್ಷ ಶಂಕರ್ ನಾಯ್ಕ್ ಉಪಸ್ಥಿತರಿದ್ದರು.

ಕರ್ನಾಟಕದ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳು ಶಿಷ್ಟಾಚಾರ, ಜೀವನ ಮೌಲ್ಯಗಳು ಹಾಗೂ ಗುರಿ ಸಾಧನೆಯ ಕುರಿತು ಉಪನ್ಯಾಸ ನೀಡಿದರು. ಶೋಭಾ ಮತ್ತು ತಂಡದವರು ಪ್ರಾರ್ಥಿಸಿದರು. ಒಕ್ಕೂಟದ ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ ಸ್ವಾಗತಿಸಿದರು. ರಾಜ್ಯ ಸಂಘಟಕ ಪ್ರವೀಣ್ ಕುಮಾರ್ ಮುಗುಳಿ ಅತಿಥಿಗಳ ಪರಿಚಯ ಮಾಡಿದರು. ಜೊತೆ ಕಾರ್ಯದರ್ಶಿ ಪ್ರಕಾಶ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ವಾಸು ನಾಯ್ಕ್ ವಂದಿಸಿರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...