ಗಲ್ಫ್ ರಾಷ್ಟ್ರಗಳಲ್ಲಿ ಶುಕ್ರವಾರ ಈದ್ ಉಲ್ ಫಿತರ್ ಆಚರಣೆ

Date:

ರಿಯಾದ್: ಸೌದಿ ಅರೇಬಿಯಾದಲ್ಲಿ ಶವ್ವಾಲ್ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಗುರುವಾರ 30ನೇ ಉಪವಾಸವನ್ನು ಪೂರ್ಣಗೊಳಿಸಿ, ಶುಕ್ರವಾರ (ಮಾರ್ಚ್ 20) ಗಲ್ಫ್ ರಾಷ್ಟ್ರಗಳಲ್ಲಿ ಈದ್-ಉಲ್-ಫಿತರ್ ಆಚರಿಸಲಾಗುವುದು.

ಸೌದಿ ಅರೇಬಿಯಾದ ತಮೀರ್ ಮತ್ತು ಸುದೈರ್ ಸೇರಿದಂತೆ ವಿವಿಧ ಭಾಗಗಳಲ್ಲಿ ಚಂದ್ರ ವೀಕ್ಷಣೆಯ ವ್ಯವಸ್ಥೆ ಮಾಡಲಾಗಿದ್ದು ಮೋಡಮಯ ವಾತಾವರಣದಲ್ಲಿ ಚಂದ್ರಕಾಣಿಸಿಕೊಂಡಿಲ್ಲ. ಆದ್ದರಿಂದ ಗುರುವಾರ ರಂಜಾನ್‌ನ 30ನೇ ದಿನವನ್ನು ಪೂರೈಸಿ, ಶುಕ್ರವಾರ ಈದ್ ಆಚರಿಸಲು ನಿರ್ಧರಿಸಲಾಗಿದೆ.

ಯುಎಇ, ಖತರ್, ಕುವೈತ್ ಮತ್ತು ಬಹ್ರೇನ್ ದೇಶಗಳಲ್ಲೂ ಶುಕ್ರವಾರವೇ ಈದ್ ಆಚರಿಸಲಾಗುವುದು. ಒಮಾನ್‌ನಲ್ಲಿಯೂ ಕೂಡ ಶುಕ್ರವಾರವೇ ಈದುಲ್ ಫಿತರ್ ಹಬ್ಬ ಆಗುವ ಸಾಧ್ಯತೆ ಇದೆ. ಇದರೊಂದಿಗೆ ಈ ಬಾರಿ ಎಲ್ಲಾ ಗಲ್ಫ್ ರಾಷ್ಟ್ರಗಳಲ್ಲಿ ಒಂದೇ ದಿನ ಈದ್ ಆಚರಿಸುವ ಸಾಧ್ಯತೆ ಹೆಚ್ಚಿದೆ.

ಸೌದಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮೈದಾನಗಳ ಬದಲಿಗೆ ಮಸೀದಿಗಳಲ್ಲೇ ನಮಾಜ್ ನಿರ್ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...