ಮೂಡುಬಿದಿರೆಯಲ್ಲಿ ಕರಕುಶಲ ಮತ್ತು ಖಾದ್ಯ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಆರಂಭ

Date:

ಮೂಡುಬಿದಿರೆ:ರೋಟರಿ ಕ್ಲಬ್ ಮೂಡುಬಿದಿರೆ ಮಿಡ್‍ಟೌನ್ ವತಿಯಿಂದ ಇಲ್ಲಿನ ಸಮಾಜ ಮಂದಿರದಲ್ಲಿ ಎರಡು ದಿನ ನಡೆಯುವ ಕ್ರಾಫ್ಟ್ ಮತ್ತು ಕ್ರಂಬ್ಸ್ ಕರಕುಶಲ ಮತ್ತು ಖಾದ್ಯ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಶನಿವಾರ ಪ್ರಾರಂಭವಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಮಹಿಳೆಯರು ಮನೆಯಲ್ಲೆ ತಯಾರಿಸಿದ ಕರಕಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿದ ರೋಟರಿ ಮಿಡ್‍ಟೌನನ್ನು ಶ್ಲಾಘಿಸಿದ ಅವರು ಈ ಅವಕಾಶ ಮಹಿಳೆಯರ ಸ್ವಾವಲಂಬಿ ಬದುಕಿಗೆ ಪ್ರೇರಣೆಯಾಗಲಿ ಎಂದರು. ಸ್ಪೂರ್ತಿ ವಿಶೇಷ ಶಾಲೆಯ ಶಿಕ್ಷಕಿ ಸುಚಿತ್ರ ಎನ್.ಪೂಜಾರಿ ಮಾತನಾಡಿ ನಮ್ಮ ಶಾಲೆಯ ವಿಶೇಷ ಸಾಮಥ್ರ್ಯದ ಮಕ್ಕಳಿಗೆ ಕರಕುಶಲ ವಸ್ತುಗಳ ತಯಾರಿಕೆಗೆ ತರಬೇತಿ ನೀಡಿವುದರ ಜತೆಗೆ ಅವರ ಕೌಶಲ ವೃದ್ಧಿಗು ಉತ್ತೇಜನ ನೀಡಲಾಗುತ್ತಿದೆ ಎಂದರು.

ಜ್ಞಾನದೀಪ ಕೋಚಿಂಗ್ ಸೆಂಟರ್‍ನ ಮುಖ್ಯಸ್ಥೆ ಎಸ್.ವೈ ಪದ್ಮಜ, ರೋಟರಿ ಮಿಡ್‍ಟೌನ್‍ನ ಮಾಜಿ ಅಧ್ಯಕ್ಷ ಮಹ್ಮದ್ ಅಸ್ಲಂ, ನಿಕಟಪೂರ್ವ ಅಧ್ಯಕ್ಷ ವಿದೇಶ್, ರೋಟರಿ ಕ್ಲಬ್‍ನ ಹಿರಿಯ ಸದಸ್ಯ ಪ್ರತಾಪ್ ಕುಮಾರ್ ಉಪಸ್ಥಿತರಿದ್ದರು.ತನುಶ್ರೀ ಧೀರಜ್ ಅವರು ಮನೆಯಲ್ಲೆ ತಯಾರಿಸಿದ `ಬ್ಲಿಸ್ ಬೈಟ್’ ಆಹಾರ ಉತ್ಪನ್ನಗಳನ್ನು ಬಿಡುಗಡೆಗೊಳಿಸಲಾಯಿತು. ರೋಟರಿ ಮಿಡ್‍ಟೌನ್ ಅಧ್ಯಕ್ಷ ಕರುಣಾಕರ ದೇವಾಡಿಗ ಸ್ವಾಗತಿಸಿದರು. ಪ್ರಶಾಂತ್ ಭಂಡಾರಿ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...