ಕಣ್ಣಿನ ತಪಾಸಣೆ ಅತೀ ಅಗತ್ಯ: ವಕೀಲ ಶರತ್ ಡಿ. ಶೆಟ್ಟಿ

Date:

ಮೂಡುಬಿದಿರೆ: ಪ್ರತಿಯೊಬ್ಬರು ನೇತ್ರ ತಪಾಸಣೆ ಮಾಡಿಕೊಳ್ಳುವುದು ಅತೀ ಅಗತ್ಯವಾಗಿದ್ದು ಇದರಿಂದ ಆಟೋ ಚಾಲಕರು ಹೊರತಲ್ಲ ಇಂತಹ ಶಿಬಿರಗಳು ನಡೆದಾಗ ಅದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಕೀಲ, ಆಟೋ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷ ಶರತ್ ಡಿ.ಶೆಟ್ಟಿ ಹೇಳಿದರು.

ಅವರು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮೂಡುಬಿದಿರೆ, ಒನ್‌ಸೈಟ್, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಮೂಡುಬಿದಿರೆ ಆಟೋರಿಕ್ಷಾ ಮಾಲಕ ಚಾಲಕರ ಸಂಘ, ವಿವಿಧ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಟೋ ಚಾಲಕ ಮಾಲಕರಿಗಾಗಿ ಸಮಾಜಮಂದಿರದಲ್ಲಿ ಮಂಗಳವಾರ ಏಪ೯ಡಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸಾದ್ ನೇತ್ರಾಲಯದ ಹಿರಿಯ ನೇತ್ರ ತಜ್ಞೆ ಡಾ.ಸ್ಮೃತಿ ನೇತ್ರದಾನ ಮಹತ್ವವನ್ನು ತಿಳಿಸಿದರು. ಪ್ರಸಾದ್ ನೇತ್ರಾಲಯದ ಅಭಿವೃದ್ಧಿ ಅಧಿಕಾರಿಯಂತಹ ಅಬ್ದುಲ್ ಖಾದರ್ ಅವರು ಕಣ್ಣಿನ ಆರೋಗ್ಯದ ಕುರಿತು ಮಾತನಾಡಿದರು.

ಸಂಘದ ಅಧ್ಯಕ್ಷ ದೀಪಕ್ ರಾಜ್ ಕೊಡಂಗಲ್ಲು ಮಾತನಾಡಿ, ಪ್ರಸಾದ್ ನೇತ್ರಾಲಯವು ಹಲವು ಟ್ರಸ್ಟ್ ಗಳ ಜೊತೆ ಜಂಟಿಯಾಗಿ ಚಾಲಕರಿಗೆ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ರಿಯಾಯಿತಿ ದರದಲ್ಲಿ ಕಣ್ಣಿನ ಪೊರೆ ಚಿಕಿತ್ಸೆಯನ್ನು ಒದಗಿಸುತ್ತಿದೆ. ಕಣ್ಣಿನ ಸಮಸ್ಯೆ ಇರುವ ಎಲ್ಲಾ ಚಾಲಕರು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.

ನೇತ್ರ ತಜ್ಞರಾದ ಡಾ. ಕ್ರೀನಾ ಉಪಸ್ಥಿತರಿದ್ದರು. ರಾಜೇಶ್ ಸುವರ್ಣ ನಿರೂಪಿಸಿದರು. 150 ಮಂದಿ ಆಟೋ ಚಾಲಕರ ತಪಾಸಣೆ ನಡೆಸಲಾಯಿತು. 27 ಮಂದಿಗೆ ಕಣ್ಣಿನ ಶಸ್ತç ಚಿಕಿತ್ಸೆ ಹಾಗೂ 10 ಮಂದಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಯಿತು. 80 ಮಂದಿ ಉಚಿತ ಕನ್ನಡಕ ಶಿಫಾರಸು ಮಾಡಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...