ಮಂಗಳೂರು(ಉಳ್ಳಾಲ) ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭೂತಪೂರ್ವ ಸ್ವಾಗತ.

Date:

ಈ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹವೇ ಯು.ಟಿ.ಖಾದರ್ ರವರ ಬಲು ದೊಡ್ಡ ಶಕ್ತಿ.

ಪುತ್ತೂರು ಕಾರ್ಯಕ್ರಮದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರನ್ನು ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಕ್ಷೇತ್ರದ ಜನಪ್ರಿಯ ಶಾಸಕ ಸಬಾಧ್ಯಕ್ಷ ಯು.ಟಿ.ಖಾದರ್ ರವರು ಅಂತರಾಷ್ಟೀಯ ಸ್ಪೀಕರ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲು ವಿದೇಶದಲ್ಲಿದ್ದರೂ ಕೂಡಾ ಅವರ ಒಂದು ದೂರವಾಣಿ ಕರೆಯಲ್ಲಿ ಪುದು,ಮೇರಮಜಲು ಹಾಗೂ ತುಂಬೆ ಗ್ರಾಮದ ಕಾಂಗ್ರೆಸ್ ನ ಸಹಸ್ರಾರು ಕಾರ್ಯಕರ್ತರು ಉತ್ಸಾಹ ಹುಮ್ಮಸ್ಸಿನಿಂದ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಸೇರಿದ್ದು ವಿಶೇಷವಾಗಿತ್ತು.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರುಗಳಾದ ಉಮ್ಮರ್ ಫಾರೂಕ್ ಹಾಗೂ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ,ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಮ್ಲಾನ್ ಮಾರಿಪಳ್ಳ,ಮೇರಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವೃಂದಾ ಪೂಜಾರಿ,ಗಣೇಶ್ ಸಾಲ್ಯಾನ್ ಸೇರಿದಂತೆ ಅನೇಕ ಮುಖಂಡರೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಸ್ತುತ ಉಳ್ಳಾಲದಲ್ಲಿ ಹಾಲಿ ಶಾಸಕ ಯು.ಟಿ.ಖಾದರ್ ವಿಧಾನಸಭೆಯ ಅಧ್ಯಕ್ಷರಾಗಿದ್ದು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲದ ಕಾರಣ ಕ್ಷೇತ್ರದಲ್ಲಿ ಕಾಂಗ್ರೆಸ್ ವೀಕ್ ಆಗಬಹುದು,ಉಳ್ಳಾಲದಲ್ಲಿ ಕಾಂಗ್ರೆಸ್ ನ್ನು ಸೋಲಿಸಬಹುದು ಎಂದು ಕೆಲ ವಿರೋಧಿಗಳೂ ಕನಸು ಕಾಣುತ್ತಿದ್ದರೂ ಇಂದಿನ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಉತ್ಸಾಹ ನೋಡಿದರೆ ಯು.ಟಿ.ಖಾದರ್ ಅವರಿಗೆ ಕ್ಷೇತ್ರದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರೇ ಅವರ ಬಹಳ ದೊಡ್ಡ ಶಕ್ತಿ,ಉಳ್ಳಾಲದಲ್ಲಿ ಕಾಂಗ್ರೆಸ್ ಸೋಲಿಸುವುದು ಅವರ ಕನಸಾಗಿಯೇ ಉಳಿಯಲಿದೆ ಹೊರತು ನನಸಾಗುವುದಿಲ್ಲ ಎಂಬುದಂತು ಸತ್ಯ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...