ಕೃಷಿ ಬದುಕು ತೃಪ್ತಿ ಮತ್ತು ಲಾಭದಾಯಕ: ಶಾಸಕ ಕೋಟ್ಯಾನ್

Date:

ಮೂಡುಬಿದಿರೆ: ಕೃಷಿಯಿಂದ ದುಡ್ಡು ಅಥವಾ ಶ್ರೀಮಂತಿಕೆ ಬಾರದಿರಬಹುದು ಆದರೆ ಕೃಷಿ ಚಟುವಟಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಾಗ ಲಾಭದ ಜತೆಗೆ ತೃಪ್ತಿ ಮತ್ತು ಪರಿಶುದ್ಧವಾದ ಜೀವನ ನಡೆಸಬಹುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.


ಅವರು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಜನ್ಮದಿನಾಚರಣೆ ಪ್ರಯುಕ್ತ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಮೂಡುಬಿದಿರೆ, ಕೃಷಿ ಇಲಾಖೆ ದ.ಕ, ಕೃಷಿ ವಿಚಾರ ವಿನಿಮಯ ಕೇಂದ್ರ ಮತ್ತು ರೈತ್ಯ ಜನ್ಯ ಫಾರ್ಮರ್ ಪ್ರೊಡ್ಯೂಸರ್ ಕಂಪೆನಿ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಬುಧವಾರ ಸಮಾಜ ಮಂದಿರದಲ್ಲಿ ನಡೆದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೆ ನಾವು ತಿನ್ನುತ್ತಿದ್ದ ಆಹಾರದಲ್ಲೆ ಔಷಧೀಯ ಗುಣವಿತ್ತು. ಪರಿಶುದ್ಧ ಗಾಳಿ, ವಾತಾವರಣದಿಂದ ನಮ್ಮ ಹಿರಿಯರು ದೀರ್ಘಕಾಲ ಬದುಕುತ್ತಿದ್ದರು. ಆದರೆ ಇಂದು ನಾವು ತಿನ್ನುವ ಆಹಾರ ಕಾಯಿಲೆಗಳಿಗೆ ಮೂಲವಾಗುತ್ತಿದೆ ಎಂದ ಅವರು ಮಕ್ಕಳಿಗೆ ಶಿಕ್ಷಣ ನೀಡುವ ಜತೆಗೆ ಅವರನ್ನು ಕೃಷಿ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.


ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿ ಯವಕರನ್ನು ಕೃಷಿಯತ್ತ ಆಕರ್ಷಿಸಲು ಸರಕಾರ ಯೋಜನೆಗಳನ್ನು ಹಮ್ಮಿಕೊಳ್ಳಬೇಕು. ಕೃಷಿಯುತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕು’ ಎಂದು ಸರಕಾರವನ್ನು ಆಗ್ರಹಿಸಿದರು. ಕೃಷಿಕ ಸಮಾಜದ ಸಂಪತ್ ಸಾಮ್ರಾಜ್ಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀಣಾ ರೈ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸಜನಾ, ಮಾತಾಜಿ ಬ್ರಹ್ಮಕುಮಾರಿ ದೀಪಾ ಈಶ್ವರಿ, ರೈತ್ಯ ಜನ್ಯ ಫಾರ್ಮರ್ ಪ್ರೊಡ್ಯೂಸರ್‍ನ ಅಧ್ಯಕ್ಷ ಲಿಯೋ ವಾಲ್ಟರ್ ನಝರತ್, ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಅಭಯ ಕುಮಾರ್, ಭಾರತೀಯ ಕಿಸಾನ್ ಸಂಘದ ಜಿಲ್ಲಾ ಮುಖಂಡ ಶಾಂತಿಪ್ರಸಾದ್ ಹೆಗ್ಡೆ ಮತ್ತು ಕೆ.ವಿಕೆ ವಿಜ್ಞಾನಿ ಕೇದರನಾಥ್, ರೈತ ಸಂಪರ್ಕ ಕೇಂದ್ರದ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಎಲ್ಲಣ್ಣ ಗೌಡ ಉಪಸ್ಥಿತರಿದ್ದರು. ಪ್ರಗತಿಪರ ಕೃಷಿಕರಾದ ಸುನಂದ ಶೆಟ್ಟಿ ಪಡುಮಾರ್ನಾಡು ಮತ್ತು ಶಿರ್ತಾಡಿಯ ಜೇಸನ್ ಲೋಬೊ ಅವರನ್ನು ಸನ್ಮಾನಿಸಲಾಯಿತು.

ರೈತರಿಗೆ ಸರಕಾರದ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು. ರೈತ ಜನ್ಯ ಕಂಪೆನಿಯ ಸಿಇಒ ಸಂದೀಪ್ ಸನ್ಮಾನಪತ್ರ ವಾಚಿಸಿದರು. ದೀಪಕ್ ಸ್ವಾಗತಿಸಿದರು. ಸದಾನಂದ ನಾರಾವಿ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಕೃಷಿ ವಿಜ್ಞಾನಿಗಳು ಮತ್ತು ರೈತರ ಮಧ್ಯೆ ಕೃಷಿ ವಿಚಾರಗೋಷ್ಠಿ ನಡೆಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...