ದ.ಕ ಮತ್ತು ಉಡುಪಿ ಜಿಲ್ಲೆಯಿಂದ ಎಸ್ಡಿಟಿಯು ರಾಜ್ಯ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಮಂಗಳೂರಿನಲ್ಲಿ ಅಭಿನಂದನಾ ಕಾರ್ಯಕ್ರಮ

Date:

ಮಂಗಳೂರು ಎ15: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ಎಸ್.ಡಿ.ಟಿ.ಯು ರಾಜ್ಯ ಸಮಿತಿಗೆ ನೂತನವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಪದಾಧಿಕಾರಿಗಳಿಗೆ ಹಾಗೂ ಸಮಿತಿ ಸದಸ್ಯರಿಗೆ ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ರವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಸ್ಡಿಟಿಯು ರಾಜ್ಯಾದ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಎಲ್ಲಾ ವರ್ಗದ ಕಾರ್ಮಿಕರನ್ನು ಸಂಘಟಿಸಿ ಅವರ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸ ಬೇಕಾದದ್ದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಈ ನಿಟ್ಟಿನಲ್ಲಿ ರಾಜ್ಯಾದ್ಯಕ್ಷ ಎಂಬ ಜವಾಬ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ನಿಬಾಯಿಸಲು ತಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿಕೆ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಖಾದರ್ ಪರಂಗಿಪೇಟೆ, ಅಬೂಬಕ್ಕರ್ ಮದ್ದ, ಅಬ್ದುಲ್ ಹಮೀದ್ ಸಾಲ್ಮರ, ಹನೀಫ್ ಮೂಳೂರು ಎಸ್ಡಿಟಿಯು ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗ್ರೆ, ಎಸ್ಡಿಟಿಯು ಮುಲ್ಕಿ ಘಟಕ ಅಧ್ಯಕ್ಷರಾದ ವಿಶು ಕುಮಾರ್ ಎಸ್.ಡಿ.ಟಿ.ಯು ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಬಿಪಿ, ಮಾಡಲ್ಸ್ ಮಂಗಳೂರು ಮಾಲಕರಾದ ಹಮೀದ್ ಶಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಿಂದ ಎಸ್ಡಿಟಿಯು ರಾಜ್ಯ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳನ್ನು ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಟಿ.ಯು ಮಂಗಳೂರು ನಗರ ತಾಲೂಕು ಸಮಿತಿ ಕಾರ್ಯದರ್ಶಿ ಅನ್ಸಾರ್ ಕುದ್ರೋಳಿ ಸ್ವಾಗತಿಸಿ, ಧನ್ಯವಾದಗೈದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...